Webdunia - Bharat's app for daily news and videos

Install App

ಅತ್ಯಾಚಾರ ಎಸಗಿದ ಇಬ್ಬರು ಕಾಮುಕರನ್ನು ಬಂಧಿಸಿದ ಪೊಲೀಸರು

Webdunia
ಗುರುವಾರ, 28 ಆಗಸ್ಟ್ 2014 (17:49 IST)
ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಇಬ್ಬರು ಕಾಮುಕರನ್ನು ತುರುವೇಕೆರೆ ಪೊಲೀಸರು ಬಂಧಿಸಿದ್ದಾರೆ.
 
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗ್ರಾಮ ಬೊಮ್ಮೇನಹಳ್ಳಿಯಿಂದ 13 ಮತ್ತು 14 ವರ್ಷದ ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿದ್ದ ಆಂಧ್ರಪ್ರದೇಶ ಮೂಲದ ರಾಜಶೇಖರ್(22), ದೇವರಾಜ್(25) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
 
ಆಗಸ್ಟ್ 25 ರಂದು ಇಬ್ಬರು ಬಾಲಕಿಯರನ್ನು ಅಪಹರಿಸಿದ್ದ ಆರೋಪಿಗಳು ಅವರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಚೈನ್ನೈನ ಮರೀನಾ ಬೀಚ್ನ ಗೆಸ್ಟ್ಹೌಸ್ನಲ್ಲಿ ಬಾಲಕಿಯನ್ನು ಇರಿಸಿ ಅವರ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಬಾಲಕಿಯರು ನಾಪತ್ತೆಯಾಗಿದ್ದಾರೆ ಎಂದು ಅವರ ಪೋಷಕರು ಆಗಸ್ಟ್ 26ಕ್ಕೆ ತುರುವೇಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ತನಿಖೆ ಶುರು ಮಾಡಿದ ಪೊಲೀಸರು ಕೇವಲ 24 ಗಂಟೆಯೊಳಗಾಗಿ ಆರೋಪಿಗಳನ್ನು ಪತ್ತೆ ಹಚ್ಚಿ ಠಾಣೆಗೆ ಕರೆತಂದ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆರೋಪಿಗಳು ಅತ್ಯಾಚಾರ ಎಸಗಿರುವ ಕೃತ್ಯ ಸಾಬೀತಾಗಿದೆ. ಈ ಸಂಬಂಧ ಪೊಲೀಸರು ಆರೋಪಿಗಳ ವಿರುದ್ಧ ಪೋಕ್ಸೋ, ಅಪಹರಣ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.
 
ಆಂಧ್ರಪ್ರದೇಶ ಮೂಲದ ರಾಜಶೇಖರ್ ಹಾಗೂ ದೇವರಾಜ್ ಶಿಲ್ಪಿಗಳಾಗಿದ್ದು ದೇವಸ್ಥಾನದ ವಿಗ್ರಹ ಕೆತ್ತನೆಗಾಗಿ ಬೊಮ್ಮೇನಹಳ್ಳಿ ಗ್ರಾಮಕ್ಕೆ ಬಂದಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments