ಮೊಬೈಲ್ ಕಳ್ಳರನ್ನ ಬಂಧಿಸಿದ ಪೊಲೀಸರು

Webdunia
ಶುಕ್ರವಾರ, 6 ಜನವರಿ 2023 (20:12 IST)
ಕಳ್ಳತನ ಮಾಡಿದ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಾ ಸಾರ್ವಜನಿಕರ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನ ಮೈಕೋ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.ಮಾರಿಮುತ್ತು, ಸೈಯ್ಯದ್ ಶುಹೇಬ್ ಹಾಗೂ ಭರತ್ ಬಂಧಿತರು.
 
ಡಿಸೆಂಬರ್ 28ರಂದು ಸಂಜೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿಗಳು ಬಿಳೇಕಹಳ್ಳಿ ಬಳಿ ಸುಜಿತ್ ಎಂಬಾತನ ಕೈಯಲ್ಲಿದ್ದ ಐಪೋನ್ ಎಗರಿಸಿ ಪರಾರಿಯಾಗಿದ್ದರು. ಫೋನ್ ಕಳೆದುಕೊಂಡ ಸುಜಿತ್ ತಕ್ಷಣ ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು. ಘಟನೆ ವರದಿಯಾಗಿ ಎರಡು ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಮೈಕೋಲೇಔಟ್ ಠಾಣಾ ಪೊಲೀಸರು ಫೋನ್ ಲೊಕೇಶನ್ ಆಧರಿಸಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌. ತನಿಖೆ ಸಂದರ್ಭದಲ್ಲಿ ಆರೋಪಿಗಳು ಇದುವರೆಗೂ ಆಗ್ನೇಯ ವಿಭಾಗದ ವಿವಿಧೆಡೆ ಕೃತ್ಯ ಎಸಗಿರುವುದು ಪತ್ತೆಯಾಗಿದ್ದು 8.50 ಲಕ್ಷ ಮೌಲ್ಯದ 35 ಮೊಬೈಲ್ ಫೋನ್‌ಗಳು, ಎರಡು ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments