Select Your Language

Notifications

webdunia
webdunia
webdunia
webdunia

ನದಹಬ್ಬದಲ್ಲಿ ಬಿಗಿ ಪೊಲೀಸ್ ಭದ್ರತೆ

ನದಹಬ್ಬದಲ್ಲಿ ಬಿಗಿ ಪೊಲೀಸ್ ಭದ್ರತೆ
ಬೆಂಗಳೂರು , ಸೋಮವಾರ, 26 ಸೆಪ್ಟಂಬರ್ 2022 (14:11 IST)
ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಗೆ ವೇದಿಕೆ ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ.
 
ಈ ಕುರಿತಂತೆ ನಗರ ಪೊಲೀಸ್ ಕಮೀಷ್ನರ್ ಡಾ.ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ. ದಸರಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದ ಲಕ್ಷಾಂತರ ಪ್ರವಾಸಿಗರು ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭದ್ರತೆ ಕೈಗೊಳ್ಳಲಾಗಿದೆ. ಜನಸ್ನೇಹಿಯಾಗಿ ಸಾರ್ವಜನಿಕರೊಂದಿಗೆ ಬೆರೆತು ಸೇವೆ ನೀಡಲು ಪೊಲೀಸ್ ಇಲಾಖೆ ಸಜ್ಜಾಗಿದ್ದು, ಇದಕ್ಕಾಗಿ ಮೈಸೂರು ನಗರದ 1255, ಹೊರ ಜಿಲ್ಲೆಗಳ 3580, ಮತ್ತು 650ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ ಒಟ್ಟು 5485 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ
 
ದಸರಾ ಭದ್ರತೆಗಾಗಿ ನಗರದಲ್ಲಿ ಈಗಾಗಲೇ ಅಳವಡಿಸಿರುವ ಕಾಯಂ ಸಿಸಿ ಕ್ಯಾಮರಾಗಳ ಜತೆಗೆ, ಹೆಚ್ಚುವರಿಯಾಗಿ ಅರಮನೆ, ಬನ್ನಿಮಂಟಪ ಮೈದಾನ, ಮೆರವಣಿಗೆ ಮಾರ್ಗ, ಇತರೇ ಪ್ರಮುಖ ಸ್ಥಳಗಳಲ್ಲಿ 110 ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, ಇವುಗಳು ದಿನದ 24 ಗಂಟೆಯೂ ರೆಕಾರ್ಡ್ ಆಗುವಂತೆ ವ್ಯವಸ್ಥೆ ಮಾಡಲಾಗಿದೆ. ವಿವಿಧ ಕಾರ್ಯಕ್ರಮಗಳು ನಡೆಯುವ ಸ್ಥಳದಲ್ಲಿ ಮುಂಚಿತವಾಗಿಯೇ 12 ಅಗ್ನಿಶಾಮಕ ದಳ, 8 ತುರ್ತು ವಾಹನಗಳಗಳನ್ನು ನಿಯೋಜನೆ ಮಾಡಲಾಗಿದೆ. ಅಕ್ಕಪಕ್ಕದ ಜಿಲ್ಲೆ, ರಾಜ್ಯಗಳಿಂದ ಅಪರಾಧಿಗಳು ಬಂದು ಅಪರಾಧ ಕೃತ್ಯ ಎಸಗುವುದನ್ನು ತಡೆಗಟ್ಟಲು ನುರಿತ ಅಪರಾಧ ವಿಭಾಗದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ವೃತ್ತಿ ನಿರತ ಹಳೆಯ ಪಿಕ್ ಪ್ಯಾಕೆಟರ್ಸ್ ಬ್ಯಾಗ್, ಸೂಟ್‌ಕೇಸ್ ಲಿಫ್ಟರ್ ಹಾಗೂ ಇತರೆ ಕಳುವು ಪ್ರಕರಣಗಳ ಅಪರಾಧಿಗಳ ವಿರುದ್ಧ ಭದ್ರತಾ ಕಾಯಿದೆಯಡಿ ಕ್ರಮಕೈಗೊಳ್ಳಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಎಡವಟ್ಟು ಮಾಡಿಕೊಂಡ ಅರವಿಂದ್ ಬೆಲ್ಲದ್