Publish Date: Mon, 14 Aug 2023 (10:52 IST)
Updated Date: Mon, 14 Aug 2023 (11:56 IST)
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ವಾಹನ ಅಡ್ಡಗಟ್ಟಿ ಗಲಾಟೆ ಮಾಡುವ ಪ್ರಕರಣಗಳ ಸಂಖ್ಯೆ ಹೆಚ್ಚಾಗ್ತಿದ್ದಂತೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸ್ ಕಮಿಷನರ್ ದಯಾನಂದ್ ಮಹತ್ವದ ಕ್ರಮ ಕೈಗೊಂಡಿದ್ದಾರೆ.
ರಸ್ತೆಯಲ್ಲಿ ಕಾರು, ಬೈಕ್ ಅಡ್ಡಗಟ್ಟಿ ಗಲಾಟೆ ಮಾಡುತ್ತಿರುವ ಪುಂಡರ ರೌಡಿಶೀಟ್ ಓಪನ್ ಮಾಡಿ ಕಠಿಣ ಕ್ರಮ ಕೈಗೊಳ್ಳುವ ಖಡಕ್ ಎಚ್ಚರಿಕೆಯನ್ನು ಕಮಿಷನರ್ ದಯಾನಂದ್ ನೀಡಿದ್ದಾರೆ.
ಈ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಡೀಪುರ ಅರಣ್ಯ ಪ್ರದೇಶದಲ್ಕೂ ಇಂತಹದ್ದೇ ಘಟನೆಯೊಂದು ಬೆಳಕಿಗೆ ಬಂದಿತ್ತು. ಪದೇ ಪದೆ ಇಂತಹ ಕೃತ್ಯಗಳು ಬೆಳಕಿಗೆ ಬರುತ್ತಿರುವುದರಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.