ನನ್ನಿಂದ ಮಗಳಿಗೂ ಕ್ಯಾನ್ಸರ್ ಎಂದು ಪೊಲೀಸ್ ಆತ್ಮಹತ್ಯೆ

Webdunia
ಶನಿವಾರ, 17 ಜೂನ್ 2023 (20:11 IST)
ಇಲ್ಲೊಬ್ಬ ಪೊಲೀಸ್​ ಸಿಬ್ಬಂದಿ, ತಮ್ಮಿಂದಲೇ ಮಗಳಿಗೆ ಕ್ಯಾನ್ಸರ್ ಬಂದಿದೆ ಎಂದು ಮನನೊಂದು ಸಾವಿಗೆ ಶರಣಾಗಿದ್ದಾರೆ. ಬೆಂಗಳೂರು ನಗರದ ಅಶೋಕನಗರ ಟ್ರಾಫಿಕ್ ಸ್ಟೇಷನ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರ್ ಎಂಬುವವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನವರಾಗಿದ್ದು, ಕೆಲ ವರ್ಷಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಕುಮಾರ್​, ಬೆಂಗಳೂರಿನ‌ ಡೈರಿ ಸರ್ಕಲ್ ಬಳಿಯಿರುವ ಪೊಲೀಸ್ ಕ್ವಾಟ್ರಸ್​ನಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಕೆಲ ಸಮಯದ ಹಿಂದೆ ಕ್ಯಾನ್ಸರ್​ನ ಲಕ್ಷಣಗಳು ಅವರ ಓರ್ವ ಮಗಳಲ್ಲಿಯೂ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಗಳಿಗೆ ಟ್ರೀಟ್​ಮೆಂಟ್​ ಕೊಡಿಸಿದ್ದರು. ಕುಮಾರ್ ಮಗಳು ಇತ್ತೀಚೆಗೆ ಚೇತರಿಸಿಕೊಳ್ಳುತ್ತಿದ್ದರು. ಆದರೂ, ನನ್ನಿಂದಲೇ ಮಗಳಿಗೆ ಕ್ಯಾನ್ಸರ್ ಬಂದಿದೆ ಎಂದು ಮನನೊಂದು ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿರುವ ಕುಮಾರ್ ತನ್ನ ಕಣ್ಣುಗಳನ್ನು ದಾನ ಮಾಡಿದ್ದಾರೆ. ಸದ್ಯ ಮೃತದೇಹವನ್ನು ಹುಟ್ಟುರೂ ಚನ್ನಗಿರಿಗೆ ತೆಗೆದುಕೊಂಡು ಹೋಗಲು ಸಿದ್ಧತೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments