Webdunia - Bharat's app for daily news and videos

Install App

ಹೊಸ ವರ್ಷಕ್ಕೆ ಫುಲ್ ಅಲರ್ಟ್ ಆದ ಪೊಲೀಸ್ ಇಲಾಖೆ

Webdunia
ಶುಕ್ರವಾರ, 23 ಡಿಸೆಂಬರ್ 2022 (20:02 IST)
ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ ಹಿನ್ನಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ರು. ನಗರ ಪೊಲೀಸ್ ಆಯುಕ್ತ ಸಿ.ಹೆಚ್.ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸುಬ್ರಮಣೇಶ್ವರ ರಾವ್, ಸಂದೀಪ್ ಪಾಟೀಲ್, ಡಿಸಿಪಿಗಳು ಭಾಗಿಯಾಗಿದ್ರು.ಹೊಸ ವರ್ಷಕ್ಕೆ ಬೆಂಗಳೂರು ಕೇಂದ್ರ ವಿಭಾಗದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಗಳಲ್ಲಿ ಹೆಚ್ಚಿನ ಜನಸಮೂಹ ಸೇರಲಿದ್ದು, ಕೈಗೊಳ್ಳಬೇಕಾದ ಅಗತ್ಯ ಭದ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ.. ಬೆಂಗಳೂರು ಕೇಂದ್ರ ವಿಭಾಗವೊಂದರಲ್ಲೇ 31 ಪಬ್, 5 ಡಿಸ್ಕೋಥೆಕ್, 26 ಲೇಡಿಸ್ ಬಾರ್, 13 ಕ್ಲಬ್ ಹಾಗೂ 71 ರೆಸ್ಟೋರೆಂಟ್ ಗಳಿದ್ದು ಅವುಗಳ ಮಾಲೀಕರಿಗೆ ನಿಯಮಾವಳಿಗಳ ಬಗ್ಗೆ ಚರ್ಚೆ ಮಾಡಲಾಗಿದೆ.
ಹೊಸ ವರ್ಷಾಚರಣೆಯ ಮೇಲೆ ಉಗ್ರರ ಕಣ್ಣು ಬೀಳಬಹುದು ಎಂಬ ಗುಪ್ತಚರ ಇಲಾಖೆಯ ಮಾಹಿತಿಯನ್ವಯ ಈಗಾಗಲೇ ನಗರದ ವಿವಿಧ ಹೋಟೆಲ್, ಲಾಡ್ಜ್ ಗಳಲ್ಲಿ‌ ಬಂದು ನೆಲೆಸಿರುವವರ ಬಗ್ಗೆ ಮಾಹಿತಿ ಕಲೆಹಾಕುವಂತೆ ಎಲ್ಲಾ ವಿಭಾಗಗಳ ಪೊಲೀಸರಿಗೆ ಸೂಚನೆ ನೀಡಲಾಗಿದೆ.ಇನ್ನು ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ವರದಿಯಾದ ಉದಾಹರಣೆಗಳು ಸಹ ಇರುವುದರಿಂದ ಮಹಿಳೆಯರ ಭದ್ರತೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆಯೂ ಚರ್ಚಿಸಲ್ಪಟ್ಟಿದೆ.
 
ಹರ್ಷಾಚರಣೆಯ ಸಂದರ್ಭದಲ್ಲಿ ಕಿಕ್ಕೇರಿಸಲು ಈಗಾಗಲೇ ವಿಶಾಖಪಟ್ಟಣಂ, ಓಡಿಶಾ, ಅಸ್ಸಾಂನಿಂದ ಮಾದಕ ಪದಾರ್ಥಗಳು ನಗರ ಪ್ರವೇಶಿಸುವುದನ್ನ ತಡೆಯಲು ಸ್ಥಳಿಯ, ಅನ್ಯರಾಜ್ಯ ಹಾಗೂ ವಿದೇಶಿ ಮಾದಕ ದಂಧೆಕೋರರ ಮೇಲೆ ಖಾಕಿ‌ ಹದ್ದಿನ ಕಣ್ಣಿರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ