Select Your Language

Notifications

webdunia
webdunia
webdunia
webdunia

ಪೊಲೀಸ್ ಇಲಾಖೆಗೆ ಆಸ್ಟ್ರೇಲಿಯಾದಿಂದ ಅತ್ಯಾಧುನಿಕ ತಂತ್ರಜ್ಞಾನ: ಜಿ.ಪರಮೇಶ್ವರ್

ಪೊಲೀಸ್ ಇಲಾಖೆಗೆ ಆಸ್ಟ್ರೇಲಿಯಾದಿಂದ ಅತ್ಯಾಧುನಿಕ ತಂತ್ರಜ್ಞಾನ: ಜಿ.ಪರಮೇಶ್ವರ್
ಬೆಂಗಳೂರು , ಬುಧವಾರ, 25 ಮೇ 2016 (18:53 IST)
ರಾಜ್ಯ ಪೊಲೀಸ್ ಇಲಾಖೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಆಸ್ಟ್ರೇಲಿಯಾ ಅತ್ಯಾಧುನಿಕ ತಂತ್ರಜ್ಞಾನ ನೀಡುವುದಾಗಿ ಭರವಸೆ ನೀಡಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. 
 
ವಿಕಾಸಸೌಧದಲ್ಲಿ ಮಾತನಾಡಿದ ಜಿ. ಪರಮೇಶ್ವರ್, ಭಾರತದಲ್ಲಿರುವ ಆಸ್ಟ್ರೇಲಿಯಾದ ಹೈ-ಕಮೀಷನರ್ ಹರಿಂದರ್ ಸಿಧು ಅವರೊಂದಿಗೆ ಮಾತುಕತೆ ನಡೆದಿದ್ದು,  ಸೈಬರ್, ಫೊರೆನ್ಸಿಕ್ ಸೇರಿದಂತೆ ಇತರ ಅಗತ್ಯವಾದ ವಿಭಾಗಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. 
 
ಪೊಲೀಸ್ ಇಲಾಖೆ ಸಹಭಾಗಿತ್ವದಲ್ಲಿ ಸಭೆ ನಡೆದಿದ್ದು, ಭಾರತದ ಆಸ್ಟ್ರೇಲಿಯಾ ಹೈ-ಕಮೀಷನರ್ ಹರಿಂದರ್ ಸಿಧು ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ಸೇರಿದಂತೆ ರಸ್ತೆ ಸುರಕ್ಷತೆ ಮತ್ತು ರಸ್ತೆ ಸಂಚಾರ ನಿಯಮಗಳ ಕುರಿತು ಚರ್ಚೆ ನಡೆಸಿದರು.
 
ಸಿಎಂ ಜನತಾದರ್ಶನದಲ್ಲಿ ದಲಿತ ಮಹಿಳೆಗೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಈ ಕುರಿತು ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಆಯುಕ್ತರು ಮಹಿಳೆಗೆ ಅಪಮಾನ ಮಾಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ ಸಹ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಜೆಡಿಎಸ್‌ ರಾಜ್ಯಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಮಾಡಿರುವ ಆರೋಪ ಸತ್ಯವಾಗಿದ್ದರೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಗೃಹ ಖಾತೆ ಸಚಿವ ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ದಲಿತ ಮಹಿಳೆಗೆ ಕಿರುಕುಳ: ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ