ಗಾಂಜಾ ಡಾನ್ ಮೇಲೆ ಪೊಲೀಸ್ ಫೈರಿಂಗ್

Webdunia
ಮಂಗಳವಾರ, 24 ಸೆಪ್ಟಂಬರ್ 2019 (16:28 IST)
ಗಾಂಜಾ ಅಕ್ರಮವಾಗಿ ಸಾಗಿಸುತ್ತಿದ್ದ ಕುಖ್ಯಾತ ಪ್ರಮುಖ ಡೀಲರ್ ಮೇಲೆ ಪೊಲೀಸ್ ಫೈರಿಂಗ್ ನಡೆದಿದೆ.

ಆನೇಕಲ್ ಸುತ್ತ ಮುತ್ತ ಅನೇಕ ವರ್ಷಗಳಿಂದ ವ್ಯಾಪಕವಾಗಿ ಗಾಂಜಾ ಸರಬರಾಜಾಗುತ್ತಿದ್ದು ಬೆಂಗಳೂರು ಗ್ರಾಮಾಂತರ ಎಸ್ಪಿಯಾಗಿ ರವಿ ಚೆನ್ನಣ್ಣನವರ್ ಕಾಲಿಟ್ಟ ಮೇಲೆ ಗಾಂಜಾ ಜಾಲದ ಮೇಲೆ ಕಣ್ಣಿಟ್ಟು ಜಾಲವನ್ನು ಭೇದಿಸ ತೊಡಗಿದ್ರು. ಇದೀಗ ಈ ಜಾಲದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.

ಮೂಲತಃ ಆಂಧ್ರದ ನೆಲ್ಲೂರಿನವನಾದ ಡೇವಿಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಾಂಜಾ ಜಾಲದ ಕಿಂಗ್ ಪಿನ್. ಗಾಂಜಾ ತರುತ್ತಿದ್ದನೆಂದು ಮಾಹಿತಿ ಪಡೆದ  ಆನೇಕಲ್ ತಾಲೂಕಿನ ಸೂರ್ಯಸಿಟಿ ಪೊಲೀಸರು, ಮರಸುರು ಮಡಿವಾಳ ಬಳಿ ಈತನ ಸ್ಕಾರ್ಪಿಯೋ ಕಾರನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಹನುಮಯ್ಯ ಎಂಬ ಪೇದೆ ಗಾಯಗೊಂಡರು.

ಪೊಲೀಸರು ಮೊದಲು ಡೇವಿಡ್'ಗೆ ಶರಣಾಗುವಂತೆ ತಿಳಿಸಿ ಗಾಳಿಯಲ್ಲಿ ಗುಂಡು ಹಾರಿಸಿದರು. ಪೊಲೀಸರ ಮಾತು ಕೇಳದೆ ಮತ್ತೆ ದಾಳಿಗೆ ಮುಂದಾಗುತ್ತಿದ್ದಂತೆ ಆರೋಪಿ ಡೇವಿಡ್'ಗೆ ಪೊಲೀಸರು ಗುಂಡು ಹಾರಿಸಿ   ಬಂಧಿಸಿದ್ದಾರೆ. ಕಾರಿನಲ್ಲಿದ್ದ ಸುಮಾರು 800 ಕೆಜಿಗೂ ಹೆಚ್ಚು ಗಾಂಜಾ ವಶಕ್ಕೆ ಪಡೆದಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments