Publish Date: Sat, 21 Oct 2017 (14:22 IST)
Updated Date: Sat, 21 Oct 2017 (14:26 IST)
ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಸೋಲದೇವನಹಳ್ಳಿಯ ಆಚಾರ್ಯ ಕಾಲೇಜು ಬಳಿ ಕುಖ್ಯಾತ ರೌಡಿಯನ್ನ ಬಂಧಿಸಿದ್ದಾರೆ.
ಕುಖ್ಯಾತ ರೌಡಿಶೀಟರ್ ರಾಜುದೊರೆಯನ್ನು ಬಂಧಿಸಿದ್ದಾರೆ. ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ರೌಡಿ ಶೀಟರ್ ಪೊಲೀಸರ ಮೇಲೆಯೇ ಪ್ರತಿ ದಾಳಿ ನಡೆಸಿದ್ದಾನೆ. ಮುಖ್ಯಪೇದೆ ನರಸಿಂಹಮೂರ್ತಿಗೆ ಡ್ರ್ಯಾಗರ್‌ನಿಂದ ಇರಿದಿದ್ದಾನೆ. ಈ ವೇಳೆ ಆತ್ಮರಕ್ಷಣೆಗೆ ಇನ್ಸ್‌ಪೆಕ್ಟರ್ ಪ್ರಕಾಶ್ ರಾಥೋಡ್ ಗುಂಡು ಹಾರಿಸಿದ್ದಾರೆ. ಈ ಸಂದರ್ಭದಲ್ಲಿ ರಾಜುದೊರೆ ಎಡಗಾಲಿಗೆ ಗುಂಡು ತಗುಲಿದೆ.
ಪೇದೆ ನರಸಿಂಹ ಮೂರ್ತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ರಾಜುದೊರೆಯನ್ನು ವಶಕ್ಕೆ ಪಡೆದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.