ಧಾರವಾಡ ಪೊಲೀಸರಿಂದ ಮಹದಾಹಿ ಹೋರಾಟಗಾರರ ಮೇಲಿನ ಅಮಾನವೀಯ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗಕ್ಕೆ ದೂರು ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನಿನ್ನೆ ನರಗುಂದ ಹಾಗೂ ನವಲಗುಂದ ಪಟ್ಟಣದಲ್ಲಿ ಪೊಲೀಸರು ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾನವ ಹಕ್ಕುಗಳ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಅವರು ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷೆ ಮೀರಾ ಸಕ್ಸೆನಾ ಅವರಿಗೆ ದೂರು ಸಲ್ಲಿಸಿದ್ದಾರೆ.
ಮಹದಾಯಿ ಮಧ್ಯಂತರ ತೀರ್ಪು ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ ರೈತರ ಮನೆಗಳ ಮೇಲೆ ದಾಳಿ ನಡೆಸಿ, ಮನೆಯಲ್ಲಿದ್ದ ಮಹಿಳೆಯರು ಹಾಗೂ ಮಕ್ಕಳ ಮೇಲೆ ಪೊಲೀಸರು ಪೌರುಷ ತೋರಿದ್ದರು. ಕೈಗೆ ಸಿಕ್ಕವರ ಮೇಲೆ ಲಾಠಿ ಬೀಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.
ಮಹಿಳೆಯರು ಹಾಗೂ ಮಕ್ಕಳ ಮೇಲೆ ಪೊಲೀಸರು ದೌರ್ಜನ್ಯ ಎಸಗಿರುವ ಕುರುತು ತನಿಖೆ ನಡೆಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಅವರು ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷೆ ಮೀರಾ ಸಕ್ಸೆನಾ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.