ನಾಯಿ ಅಟ್ಟಿಸಿಕೊಂಡು ಬಂತೆಂದು ಸ್ಪೀಡಾಗಿ ಬೈಕ್ ಓಡಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಯುವಕ

Webdunia
ಶುಕ್ರವಾರ, 26 ಅಕ್ಟೋಬರ್ 2018 (09:39 IST)
ಬೆಂಗಳೂರು: ಮಧ್ಯರಾತ್ರಿ ಮನೆಗೆ ಹೋಗುವಾಗ ಬೆಂಗಳೂರಿನ ಬೀದಿಗಳಲ್ಲಿ ಬೀದಿ ನಾಯಿಗಳು ಯಾವಾಗ ದಾಳಿ ಮಾಡುತ್ತದೋ ಎಂಬ ಭಯ ಎಲ್ಲರಿಗೂ ಇದ್ದೇ ಇರುತ್ತದೆ.

ಆದರೆ ಕೆಆರ್ ಪುರದಲ್ಲಿ ಯುವಕನೊಬ್ಬ ಬೈಕ್ ನಲ್ಲಿ ಮಧ್ಯರಾತ್ರಿ ಮನೆಗೆ ತೆರಳುವಾಗ ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಬರುತ್ತಿದ್ದವು ಎಂದು ಸ್ಪೀಡಾಗಿ ಹೋಗಿ ಪೊಲೀಸರ ಕೈಲಿ ಸಿಕ್ಕಿಬಿದ್ದಿದ್ದಾನೆ.

ಬೈಕ್ ಸ್ಪೀಡಾಗಿ ಓಡಿಸಿದ್ದಕ್ಕೆ ಪೊಲೀಸರ ಲಾಠಿ ಏಟು ತಿನ್ನಬೇಕಾಯಿತು ಎಂದು ರೋಹನ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಅಲವತ್ತುಗೈದಿದ್ದಾರೆ. ಅಷ್ಟೇ ಅಲ್ಲದೆ ಇದನ್ನು ನಗರ ಪೊಲೀಸ್ ಆಯುಕ್ತರ ಫೇಸ್ ಬುಕ್ ಪೇಜ್ ಗೆ ಹಂಚಿಕೊಂಡಿದ್ದು, ಅಮಾಯಕರ ಮೇಲೆ ಪೊಲೀಸರ ದೌರ್ಜನ್ಯ ತಡೆಯುವಂತೆ ಮನವಿ ಮಾಡಿದ್ದಾನೆ.

ಆದರೆ ಪೊಲೀಸರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಆನಂದಪುರ ವೃತ್ತದಲ್ಲಿ ಇಬ್ಬರು ಯುವಕರು ವೇಗವಾಗಿ ಬೈಕ್ ಓಡಿಸಿಕೊಂಡು ಬರುತ್ತಿದ್ದಾಗ ನಿಲ್ಲಿಸುವಂತೆ ಸೂಚನೆ ನೀಡಿದರೂ ನಿಲ್ಲಸದೇ ಇದ್ದಾಗ ಅನುಮಾನದಿಂದ ನಿಲ್ಲಿಸಿ ವಿಚಾರಣೆ ಮಾಡಿದ್ದೇವೆ. ಆದರೆ ಲಾಠಿ ಏಟು ನೀಡಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments