Select Your Language

Notifications

webdunia
webdunia
webdunia
webdunia

ಕಪ್ಪು ಹಣದ ವ್ಯವಹಾರದಲ್ಲಿ ಪೊಲೀಸರು: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ತರಾಟೆ

ಕಪ್ಪು ಹಣದ ವ್ಯವಹಾರದಲ್ಲಿ ಪೊಲೀಸರು: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ತರಾಟೆ
ಬೆಂಗಳೂರು , ಬುಧವಾರ, 7 ಡಿಸೆಂಬರ್ 2016 (14:06 IST)
ಕಪ್ಪು ಹಣದ ಅವ್ಯವಹಾರದಲ್ಲಿ ಪೊಲೀಸರು ಸಿಕ್ಕಿ ಬಿದ್ದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 
ಕೆಲ ಪೊಲೀಸ್ ಕಪ್ಪು ಹಣದ ವ್ಯವಹಾರದಲ್ಲಿ ಭಾಗಿಯಾಗಿ ಹಣ ಸಾಗಿಸುತ್ತಿರುವಾಗ ಸಿಕ್ಕು ಬಿದ್ದಿರುವ ಹಿನ್ನೆಲೆಯಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಗೃಹ ಸಚಿವಾಲಯಕ್ಕೆ ಸಿಎಂ ಆದೇಶ ನೀಡಿದ್ದಾರೆ.
 
ಕಪ್ಪು ಹಣದ ಅವ್ಯವಹಾರದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ. ಅಪರಾಧ ಚಟುವಟಿಕೆ ತಡೆಯುವವರೇ ಅಪರಾಧ ಚಟುವಟಿಕೆಯಲ್ಲಿ ಪಾಲ್ಗೊಂಡಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಗೃಹ ಇಲಾಖೆ ಕೂಡಲೇ ಆರೋಪಿ ಪೊಲೀಸರ ವಿರುದ್ಧ ಅಪರಾಧ ಪ್ರಕರಣ ದಾಖಲಿಸಿ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರ ಬಂಧನ