Select Your Language

Notifications

webdunia
webdunia
webdunia
webdunia

ಲಂಚ ಪಡೆಯುತ್ತಿರುವಾಗಲೇ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌, ಹೈಡ್ರಾಮಾ

Police Inspector Govindaraju

Sampriya

ಬೆಂಗಳೂರು , ಶುಕ್ರವಾರ, 30 ಜನವರಿ 2026 (16:23 IST)
Photo Credit X
ಬೆಂಗಳೂರು: ₹4ಲಕ್ಷ ಲಂಡ ಪಡೆಯುತ್ತಿರುವಾಗಲೇ ಪೊಲೀಸ್ ಇನ್ಸ್‌ಪೆಕ್ಟರ್‌ ಒಬ್ಬರು ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದದ್ದು,  ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಳೊಂದಿಗೆ ಪೊಲೀಸ್ ಇನ್ಸ್ ಪೆಕ್ಟರ್ ಹೈಡ್ರಾಮಾ ಇದೀಗ ವೈರಲ್ ಆಗಿದೆ.

ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ₹4 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. 

ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್‌ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ತಿಳಿದುಬಂದಿದೆ. 

ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. 

ಈ ಪ್ರಕರಣದಲ್ಲಿ ಒಟ್ಟು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಇದರಲ್ಲಿ 1 ಲಕ್ಷ ರೂಪಾಯಿ ಈಗಾಗಲೇ ಪಡೆದುಕೊಂಡಿದ್ದರು. ಉಳಿದ 4 ಲಕ್ಷ ರೂಪಾಯಿ ಸ್ವೀಕರಿಸುವಾಗ ಟ್ರ್ಯಾಪ್ ಆಗಿದ್ದು, ಧನರಾಜ್ ಎಂಬುವವರು ನೀಡಿದ ದೂರಿನನ್ವಯ ಈ ಕಾರ್ಯಾಚರಣೆ ನಡೆಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video