Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

Sampriya
ಸೋಮವಾರ, 16 ಜೂನ್ 2025 (18:48 IST)
Photo Credit X
ದಾವಣಗೆರೆ: ಸಿಎಂ ಸಿದ್ದರಾಮಯ್ಯ ಅವರು ದಾವಣಗೆರೆ ಜಿಲ್ಲಾ ಪ್ರವಾಸದ ವೇಳೆ ರೈತನೊಬ್ಬ ವಿಶೇಷ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿದೆ. 

ರೈತರ ಮನವಿಗೆ ಸ್ಪಂದಿಸದ ಪೊಲೀಸರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡ ಬಲ್ಲೂರು ರವಿಕುಮಾರ್ ಅವರು ಸಿದ್ದರಾಮಯ್ಯ ಕಾರಿಗೆ ಅಡ್ಡ ಮಲಗಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ರೈತನ ಮೇಲೆ ಪೊಲೀಸರು ಕಾಲಿನಿಂದ ಒದ್ದಿದ್ದಾರೆಂಬ ಆರೋಪ ಕೇಳಿಬಂದಿದೆ. 

ಈ ಘಟನೆಯ ಭಾನುವಾರ ದಾವಣಗೆರೆ ಹೆದ್ದಾರಿ ಪಕ್ಕದಲ್ಲಿರುವ ಪ್ರವಾಸಿ ಮಂದಿರದ ಬಳಿ ನಡೆದಿದೆ. ರೈತ ಮುಖಂಡ ರವಿಕುಮಾರ್ ಅವರು ತಮ್ಮ ಪ್ರದೇಶದ ಕೆರೆ ತುಂಬಿಸುವುದು ಹಾಗೂ ಹೂಳೆತ್ತುವ ಸಮಸ್ಯೆ ಕುರಿತು ಮನವಿ ನೀಡಲು ಬಂದಿದ್ದರು. ಆದರೆ ಭದ್ರತಾ ಸಿಬ್ಬಂದಿ ಅವರನ್ನು ತಡೆದು, ಅವರ ಮೇಲೆ ಕಾಲಿನಿಂದ ಒತ್ತಿದ್ದಾರೆ ಎಂಬ ಆರೋಪ ಹೊರಸಾಗಿದೆ.

ಇದಕ್ಕೆ ಕೋಪಗೊಂಡ ರವಿಕುಮಾರ್, 'ಪೊಲೀಸರು ಮಾನವೀಯತೆ ಇಲ್ಲದೆ ವರ್ತಿಸುತ್ತಿದ್ದಾರೆ. ರೈತರ ಕಳವಳವನ್ನು ಹಗುರವಾಗಿ ತೆಗೆದುಕೊಳ್ಳಲಾಗುತ್ತಿದೆ' ಎಂದು ಜೋರಾಗಿ ಕಿಡಿಕಾರಿದರು. ತಕ್ಷಣವೇ ಸಿಎಂ ಸಿದ್ದರಾಮಯ್ಯ ಅವರು ಕಾರು ನಿಲ್ಲಿಸಿ, ರೈತ ಮುಖಂಡರನ್ನು ತಮ್ಮ ಬಳಿ ಕರೆಸಿ ಮಾತುಕತೆ ನಡೆಸಿದರು.

ಈ ವೇಳೆ ಸಿಎಂ ಅವರೇ ರೈತ ಮುಖಂಡನಿಂದ ಮನವಿಯನ್ನು ಸ್ವೀಕರಿಸಿದರು. ಅದಲ್ಲದೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. 

ಬಳಿಕ ರೈತ ಮುಖಂಡನ ನೇತೃತ್ವದಲ್ಲಿ ಹಲವು ರೈತರು ಪ್ರತಿಭಟನೆ ಮುಂದುವರೆಸಿದ್ದು, ಭದ್ರತಾ ಸಿಬ್ಬಂದಿಯ ವಿರೋಧವಾಗಿ ಘೋಷಣೆಗಳನ್ನು ಕೂಗಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments