ಮಂಗಳೂರು ಹಳೆ ವಿಮಾನ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಆಕ್ರಮವಾಗಿ ಪ್ರವೇಶ

Webdunia
ಮಂಗಳವಾರ, 6 ಜುಲೈ 2021 (19:21 IST)
ಮಂಗಳೂರು ಹಳೆ ವಿಮಾನ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸೋಮವಾರ ರಾತ್ರಿ ಕಂಡು ಬಂದಿದ್ದು, ವಿಮಾನ ನಿಲ್ದಾಣದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದಾನೆ ಎಂಬ ಆರೋಪಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಸೋಮವಾರ ರಾತ್ರಿ ಸುಮಾರು 11 ಗಂಟೆಗೆ ಸಿಐಎಸ್‌ಎಫ್ ಸಿಬ್ಬಂದಿಯು ಗಸ್ತು ತಿರುಗುತ್ತಿದ್ದಾಗ ರನ್‌ವೇ ಕಾಮಗಾರಿ ನಡೆಯುತ್ತಿದ್ದ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕಂಡು ಬಂದಿದ್ದ. ಆತನನ್ನು ಹಿಡಿದು ವಿಚಾರಿಸಿದಾಗ ತನ್ನ ಹೆಸರು ರಾಕೇಶ್, ಬಧುಹಾ ಗ್ರಾಮ, ಮುರ್ಸಿದಾಬಾದ್ ಪಶ್ಚಿಮ ಬಂಗಾಳ ಎಂದು ತಿಳಿಸಿದ್ದ.
ತಾನು ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು, ಲಾರಿ ಚಾಲಕ ತನಗೆ ಸಂಬಳ ನೀಡದೆ ಬಿಟ್ಟು ಹೋಗಿದ್ದು ದಾರಿ ಕಾಣದೆ ವಿಮಾನ ನಿಲ್ದಾಣ ಎಂದೂ ತಿಳಿಯದೇ ಈ ಕಡೆ ಬಂದಿರುವೆ ಎಂದಿದ್ದಾನೆ. ಆ ಬಳಿಕ ಮಂಗಳೂರು ವಿಮಾನ ನಿಲ್ದಾಣದ ಸಿಐಎಸ್‌ಎಫ್ ಯುನಿಟ್‌ನ ನಿರೀಕ್ಷಕ ಪ್ರಮೋದ್ ಕುಮಾರ್ ವಿಚಾರಣೆ ನಡೆಸಿ ನಂತರ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ ನಿಷೇಧಿತ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಶೂಟೌಟ್ ಗೆ ಐಪಿಎಸ್ ವರ್ತಿಕಾ ಕಟಿಯಾರ್ ತಲೆದಂಡ

ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿಸಿದ ಆರೋಪ: ಆರ್ ಅಶೋಕ್ ಹೇಳಿದ್ದೇನು

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಯಪ್ಪಾ.. ಈ ಪೂಜಾರಿಯ ಮಂತ್ರ ಕೇಳಿದ್ರೆ ಶನಿ ದೇವ ಲೋಕ ಬಿಟ್ಟು ಓಡಿ ಹೋಗ್ಬೇಕು Video

ಮೈಸೂರಿನಲ್ಲಿ ಹೆದ್ದಾರಿಯಲ್ಲೇ ಅಪಾಯಕಾರಿ ವೀಲಿಂಗ್ ಮಾಡಿದ ಯುವಕರು Video

ಮುಂದಿನ ಸುದ್ದಿ
Show comments