Select Your Language

Notifications

webdunia
webdunia
webdunia
webdunia

ಪೊಲೀಸ್ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯರೊಂದಿಗೆ ಚರ್ಚಿಸಿದ ಜಿ.ಪರಮೇಶ್ವರ್

ಪೊಲೀಸ್ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯರೊಂದಿಗೆ ಚರ್ಚಿಸಿದ ಜಿ.ಪರಮೇಶ್ವರ್
ಬೆಂಗಳೂರು , ಮಂಗಳವಾರ, 31 ಮೇ 2016 (11:55 IST)
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜೂನ್ 4 ರಂದು, ರಾಜ್ಯಾದ್ಯಂತ ಪೊಲೀಸರು ಕೈಗೊಂಡಿರುವ ಸಾಮೂಹಿಕ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದರು.
 
ರಾಜ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಪೊಲೀಸರು ನಡೆಸುತ್ತಿರುವ ಪ್ರತಿಭಟನೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಸುಧೀರ್ಘ ಚರ್ಚೆ ನಡೆಸಿ ಸಂಪೂರ್ಣ ಮಾಹಿತಿಯನ್ನು ನೀಡಿದರು.
 
ಪೊಲೀಸರು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಸಾಧ್ಯಾಸಾಧ್ಯತೆಯ ಕುರಿತು ಚರ್ಚಿಸಲು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಸಂಜೆ ಸಭೆ ಕರೆದಿದ್ದಾರೆ. ಸಭೆಯಲ್ಲಿ ಡಿಜಿ-ಐಜಿಪಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಳ್ಳುತ್ತಿದ್ದು, ಪೊಲೀಸರ ವೇತನ ಮತ್ತು ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಯಲಿದೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಚಲಿಸುತ್ತಿರುವ ಕಾರಿನಲ್ಲಿಯೇ ಮಹಿಳೆಯ ಮೇಲೆ ಐವರು ಕಾಮುಕರಿಂದ ಗ್ಯಾಂಗ್‌ರೇಪ್