ಬೆಂಗಳೂರು: ಸೋಷಿಯಲ್ ಮೀಡಿಯಾ ಫೇಸ್ ಬುಕ್ ನಲ್ಲಿ ಅನ್ಯಕೋಮಿನ ಯುವಕನೊಬ್ಬ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದು, ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದ. ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅಸ್ಗರ್ ಕೊಪ್ಪ ಎಂಬಾತ ಫೇಸ್ ಬುಕ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದು ಪ್ರಧಾನಿ ಮೋದಿ, ಹಿಂದೂ ಸಂಘಟನೆ ಬಜರಂಗ ದಳದ ವಿರುದ್ಧ ಅವಹೇಳನಕಾರಿಯಾಗಿ ಬರೆದುಕೊಂಡಿದ್ದ. ಈತನ ಪೋಸ್ಟ್ ಗೆ ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಆದರೆ ಈ ಪೋಸ್ಟ್ ಮಾಡಿದ ಬಳಿಕ ಆತ ಖಾತೆಯನ್ನೇ ಡಿಲೀಟ್ ಮಾಡಿದ್ದ. ಆದರೆ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಕೊಪ್ಪ ಠಾಣೆಯ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿದ್ದರು. ಇದೀಗ ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ವಿಧಾನಸಭೆಯಲ್ಲಿ ಇತ್ತೀಚೆಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಅಂತಹದ್ದೇ ಘೋಷಣೆ ವಿಚಾರ ಸುದ್ದಿಯಾಗಿದೆ. ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣ ಇನ್ನೂ ತನಿಖೆ ಪ್ರಗತಿಯ ಹಂತದಲ್ಲಿದೆ. ಇದೀಗ ಮತ್ತೊಂದು ಅಂತಹದ್ದೇ ಪ್ರಕರಣ ನಡೆದಿದೆ.