Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ನಿವಾಸಕ್ಕೆ ಪೊಲೀಸ್ ಭದ್ರತೆ

ಸಿದ್ದರಾಮಯ್ಯ ನಿವಾಸಕ್ಕೆ ಪೊಲೀಸ್ ಭದ್ರತೆ
bangalore , ಮಂಗಳವಾರ, 23 ಆಗಸ್ಟ್ 2022 (15:02 IST)
ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ ಒದಗಿಸಿರುವ ರಾಜ್ಯ ಸರ್ಕಾರ ಇದೀಗ ಇನ್ನಷ್ಟು ಮುಂಜಾಗ್ರತ ಕ್ರಮ ಕೈಗೊಂಡಿದೆ. ಶಿವಾನಂದ ವೃತ್ತದ ಸಮೀಪ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಸಿದ್ದರಾಮಯ್ಯಗೆ ಜೀವ ಬೆದರಿಕೆ ಹಾಗೂ ಮೊಟ್ಟೆ ಎಸೆತ ಪ್ರಕರಣದ ಹಿನ್ನೆಲೆಯಲ್ಲಿ ಈ ಭದ್ರತೆ ಒದಗಿಸಿದ್ದು, ಪ್ರತಿಪಕ್ಷ ನಾಯಕರ ನಿವಾಸಕ್ಕೆ ಸದಾ ಸಾರ್ವಜನಿಕರ ಭೇಟಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಭದ್ರತೆ ಹೆಚ್ಚಿಸುವ ಆದೇಶದ ಬಳಿಕ ಒಂದೊಂದೇ ಸವಲತ್ತುಗಳನ್ನು ಕಲ್ಪಿಸಲಾಗುತ್ತದೆ. ಸಿಎಂ ಬಸವರಾಜ ಬೊಮ್ಮಾಯಿ ಮೂರು ದಿನಗಳ ಹಿಂದೆ ಸಿದ್ದರಾಮಯ್ಯ ಹೆಚ್ಚಿನ ಭದ್ರತೆ ಒದಗಿಸುವ ಭರವಸೆ ನೀಡಿದ್ದರು. ಅದೇ ಪ್ರಕಾರ ನಿನ್ನೆ ಹೆಚ್ಚಿನ ಭದ್ರತೆ ಹಾಗೂ ಹೆಚ್ಚುವರಿ ಸಿಬ್ಬಂದಿ ನೀಡಿದ್ದ ಸರ್ಕಾರ ಇಂದು ಇನ್ನಷ್ಟು ಸವಲತ್ತುಗಳನ್ನು ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ