Publish Date: Tue, 07 Mar 2017 (19:00 IST)
Updated Date: Tue, 07 Mar 2017 (19:03 IST)
ಅತ್ಯಾಚಾರಕ್ಕೆ ಯತ್ನ ಆರೋಪ ಹೊತ್ತಿರುವ ರೌಡಿಶೀಟರ್ ಶಿವರಾಮರೆಡ್ಡಿ ಮೇಲೆ ಪೊಲೀಸರು ಎರಡು ಸುತ್ತಿನ ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.
ಮಾರತಹಳ್ಳಿಯಲ್ಲಿ ಶಿವರಾಮರೆಡ್ಡಿ ಇದ್ದಾನೆ ಎನ್ನುವ ಸುಳಿವು ಪಡೆದ ಪೊಲೀಸರು ಬಂಧಿಸಲು ಆಗಮಿಸುತ್ತಿದ್ದಂತೆ ಮಾರಕಾಸ್ತ್ರಗಳಿಂದ ಪೊಲೀಸ್ ಇನ್‌ಸ್ಪೆಕ್ಟರ್ ಸಾಧಿಕ್ ಪಾಶಾ ಮೇಲೆ ದಾಳಿ ಮಾಡಲು ಯತ್ನಿಸಿದಾಗ ಬೊಮ್ಮನಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ಮಂಜುನಾಥ್ ಎರಡು ಸುತ್ತು ಗುಂಡು ಹಾರಿಸಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಪ್ರದೇಶದಲ್ಲಿ ರೌಡಿಶೀಟರ್ ಕುಖ್ಯಾತಿಯನ್ನು ಹೊಂದಿರುವ ಶಿವರಾಮರೆಡ್ಡಿ ಡಿಸೆಂಬರ್ 16 ರಂದು ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಪಿಜಿಗೆ ನುಗ್ಗಿ ಯುವತಿಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದಾಗ ಆರೋಪಿಯ ವಿರುದ್ಧ ಎಚ್‌ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಶಿವರಾಮರೆಡ್ಡಿ ಮಾರಕಾಸ್ತ್ರದಿಂದ ದಾಳಿ ಮಾಡಿದ್ದರಿಂದ ಪೊಲೀಸ್ ಅಧಿಕಾರಿ ಸಾದಿಕ್ ಪಾಷಾ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗುಂಡೇಟಿನಿಂದ ಗಾಯಗೊಂಡ ಆರೋಪಿ ಶಿವರಾಮರೆಡ್ಡಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.