Select Your Language

Notifications

webdunia
webdunia
webdunia
webdunia

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Mahesh Shetty Timarodi

Krishnaveni K

ಧರ್ಮಸ್ಥಳ , ಗುರುವಾರ, 21 ಆಗಸ್ಟ್ 2025 (11:46 IST)
ಧರ್ಮಸ್ಥಳ: ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರೀ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು  ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಜಿರೆಯ ತಿಮರೋಡಿ ನಿವಾಸಕ್ಕೆ ಪೊಲೀಸರು ಬಂದಿದ್ದರು. ಉಡುಪಿ ಎಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ನಿವಾಸಕ್ಕೆ ಬಂದು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಈ ವೇಳೆ ಹೈ ಡ್ರಾಮಾ ನಡೆದಿದೆ. ಗಿರೀಶ್ ಮಟ್ಟೆಣ್ಣನವರ್ ಪೊಲೀಸರಿಗೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ನಿನ್ನೆಯೇ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಪೊಲೀಸರು ಇಂದು ಅವರನ್ನು ವಶಕ್ಕೆ ಪಡೆಯಲು ಖುದ್ದಾಗಿ ಮನೆಗೆ ಬಂದಿದ್ದಾರೆ.

ಈ ವೇಳೆ ಗಿರೀಶ್ ಮಟ್ಟೆಣ್ಣನವರ್ ಸಹಿತ ಮಹೇಶ್ ಶೆಟ್ಟಿ ಬೆಂಬಲಿಗರು ಅವರನ್ನು ತಡೆದಿದ್ದಾರೆ. ಬಳಿಕ ಅವರನ್ನು ಪೊಲೀಸರು ತಮ್ಮ ವಾಹನದಲ್ಲಿ ಕರೆದೊಯ್ದರು. ಈ ವೇಳೆ ನನ್ನ ಜೀವಕ್ಕೆ ಏನಾದರೂ ಆದರೆ ಸರ್ಕಾರವೇ ಕಾರಣವಾಗುತ್ತದೆ ಎಂದು ಮಹೇಶ್ ಶೆಟ್ಟಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ