Webdunia - Bharat's app for daily news and videos

Install App

ಮಹೇಶ್ ಶೆಟ್ಟಿ ತಿಮರೋಡಿ ಬಳಿಕ ಯೂಟ್ಯೂಬರ್ ಸಮೀರ್ ಮನೆಗೆ ಬಂದ ಪೊಲೀಸರು

Krishnaveni K
ಗುರುವಾರ, 21 ಆಗಸ್ಟ್ 2025 (14:43 IST)
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಬಳಿಕ ಇದೀಗ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಲ್ಲಿ ಪೊಲೀಸರು ಯೂಟ್ಯೂಬರ್ ಸಮೀರ್ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ.

ಧರ್ಮಸ್ಥಳ ವಿಚಾರ ಈಗ ಭಾರೀ ಸದ್ದು ಮಾಡುತ್ತಿದೆ. ಇಂದು ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರೀ ಹೇಳಿಕೆ ನೀಡಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿದ್ದರು.

ಇದೀಗ ಧರ್ಮಸ್ಥಳದ ಬಗ್ಗೆ ಯೂಟ್ಯೂಬ್ ನಲ್ಲಿ ವಿಡಿಯೋ ಹಂಚಿಕೊಂಡು ವೈರಲ್ ಆಗಿದ್ದ ಸಮೀರ್ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಲ್ಲಿ ಸಮೀರ್ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿರುವ ಸಮೀರ್ ಮನೆ ಬಳಿ ಪೊಲೀಸರು ಬಂದಿದ್ದು ಸದ್ಯದಲ್ಲೇ ಬಂಧಿಸುವ ಸಾಧ್ಯತೆಯಿದೆ. ಸೌಜನ್ಯ ಪ್ರಕರಣದ ಬಗ್ಗೆ ವಿಡಿಯೋ ಮಾಡಿದ್ದ ಸಮೀರ್ ಧರ್ಮಸ್ಥಳದ ಬಗ್ಗೆ ನೇರಾನೇರ ಆರೋಪ ಮಾಡಿದ್ದರು. ಅವರ ವಿಡಿಯೋಗಳು ರಾತ್ರೋ ರಾತ್ರಿ ವೈರಲ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು ಕುರ್ಚಿಯನ್ನೇ ಅಲುಗಾಡಿಸಿದ ಸ್ನೇಹಮಹಿ ಕೃಷ್ಣ ದಿಢೀರ್‌ ಧರ್ಮಸ್ಥಳ ಠಾಣಾ ಮೆಟ್ಟಿಲೇರಿದ್ದೇಕೆ

ಧರ್ಮಸ್ಥಳ ಕೇಸ್: ಧರ್ಮದ ಉಳಿವಿಗಾಗಿ ಬಿಜೆಪಿಯಿಂದ ಧರ್ಮದ ಯುದ್ಧ ಎಂದ ವಿಜಯೇಂದ್ರ

ಪ್ರಿಯಾಂಕ ಗಾಂಧಿ ಪ್ರತಿನಿಧಿಸುವ ವಯನಾಡಿಗೆ ರಾಜ್ಯದಿಂದ 10 ಕೋಟಿ: ನೀವು ಕೇರಳ ಸಿಎಮ್ಮಾ ಎಂದ ಆರ್ ಅಶೋಕ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

ಮುಂದಿನ ಸುದ್ದಿ
Show comments