ಸಂಸದ ಅನಂತ್ ಕುಮಾರ್ ಹೆಗಡೆ ನಾಪತ್ತೆ: ಬಂಧನಕ್ಕೆ ಪೊಲೀಸರ ಬಲೆ

Webdunia
ಬುಧವಾರ, 11 ಜನವರಿ 2017 (19:42 IST)
ವೈದ್ಯರ ಮೇಲೆ ಹಲ್ಲೆ ಮಾಡಿ ಗೂಂಡಾವರ್ತನೆ ತೋರಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ನಾಪತ್ತೆಯಾಗಿದ್ದು, ಸಂಸದರ ಬಂಧನಕ್ಕೆ ಶಿರಸಿ ಪೊಲೀಸರು ಬಲೆ ಬೀಸಿದ್ದಾರೆ. 
ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರ ತಾಯಿ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಸಂಸದರು ಅವರನ್ನು ಟಿಎಸ್‌ಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಇತರ ರೋಗಿಗಳನ್ನು ವೈದ್ಯರು ಪರಿಶೀಲಿಸುತ್ತಿದ್ದರು. ಹೀಗಾಗಿ ಸಂಸದರ ತಾಯಿಗೆ ಚಿಕಿತ್ಸೆ ನೀಡಲು ತಡವಾದ ಕಾರಣ ಸಂಸದರ ಗರಂ ಆಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. 
 
ವೈದ್ಯರಾದ ಮಧುಕೇಶ್ವರ್ ಹಾಗೂ ಬಾಲಚಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇಬ್ಬರೂ ವೈದ್ಯರಿಗೆ ರಕ್ತ ಬರುವಂತೆ ಹಲ್ಲೆ ಮಾಡಿ ಗೂಂಡಾವರ್ತನೆ ತೋರಿದ್ದರು.
 
ಗೂಂಡಾವರ್ತನೆ ತೋರಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಶಿರಸಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ  ಸ್ವಂ ಪ್ರೇರಿತ ದೂರು ದಾಖಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments