Publish Date: Tue, 17 Jun 2025 (19:39 IST)
Updated Date: Tue, 17 Jun 2025 (19:41 IST)
ಮಂಗಳೂರು: ಹಿಂದೂ ಕಾರ್ಯರ್ತರ ಮನೆಗಳಿಗೆ ಪೊಲೀಸರು ಭೇಟಿ ನೀಡುತ್ತಿದ್ದ ವಿಚಾರವಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು.
ಈ ಸಂಬಂಧ ಸಮಗ್ರ ತನಿಖೆ ನಡೆಸಿದ್ದಾರೆ. ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ ಮಾಡಿದೆ.
ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಡಿಜಿ&ಐಜಿಪಿಗೆ ಸೂಚನೆ ನೀಡಿದೆ.
ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಆದೇಶ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ಸಾರ್ವಜನಿಕರು, ಸಮಾಜ ಸೇವಕರು ಮತ್ತು ಒಂದು ಸಮುದಾಯದ ಸಂಘಟನೆಗಳಿಗೆ ಸಂಬಂಧಿಸಿದ ವ್ಯಕ್ತಿಗಳ ಮನೆಗಳಿಗೆ ಪೊಲೀಸರು ಯಾವುದೇ ಅಪರಾಧದ ಹಿನ್ನೆಲೆ, ಎಫ್ಐಆರ್, ವಾರೆಂಟ್ ಅಥವಾ ಕಾನೂನು ದಾಖಲೆ ನೀಡದೆ ಕಾನೂನು ಬಾಹಿರವಾಗಿ ರಾತ್ರಿ 11 ಗಂಟೆ ನಂತರ ಭೇಟಿ ನೀಡಿದ್ದಾರೆ.