Select Your Language

Notifications

webdunia
webdunia
webdunia
webdunia

ಹಿಂಸಾಚಾರ ನಡೆಯದಂತೆ ಪೊಲೀಸ್ ಠಾಣೆಯಲ್ಲಿ ಮುಂಜಾಗ್ರತೆ ವಹಿಸಲು ಸೂಚನೆ- ಸಿಎಂ

cm bommai voilene karantaka police ಕರ್ನಾಟಕ ಪೊಲೀಸ್‌ ಸಿಎಂ ಬೊಮ್ಮಾಯಿ
bengaluru , ಶನಿವಾರ, 11 ಜೂನ್ 2022 (14:22 IST)
ಹುಬ್ಬಳ್ಳಿ: ಪರಿಷತ್ ನ ನಾಲ್ಕು ಸ್ಥಾನಗಳಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು,  ದೇಶದಲ್ಲಿ ವಿವಿಧೆಡೆ ನಡೆಯುತ್ತಿರುವ ಹಿಂಸಾಚಾರ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ನಿನ್ನೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಪ್ರತಿಯೊಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ವಹಿಸಲು‌ ಸೂಚಿಸಲಾಗಿದೆ. ಆಯಾ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಸೌಹಾರ್ದತೆ ಕಾಪಾಡಬೇಕೆಂದು‌ ತಿಳಿಸಲಾಗಿದೆ. ಈ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಜತೆಗೆ ಚರ್ಚೆ ಮಾಡಿದ್ದೇನೆ ಎಂದರು.
ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್‌ ದಾಳಿ ನಡೆದಿರುವುದು ದುರದೃಷ್ಟಕರ. ಅಂತವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕೈಗೊಳ್ಳಲು ಚಿಂತಿಸಲಾಗಿದೆ.
ಉತ್ತರ ಪ್ರದೇಶದಂತ ಘಟನೆಗಳು ನಮ್ಮಲ್ಲಿ ನಡೆದಿಲ್ಲ. ನಮ್ಮ ರಾಜ್ಯ ಶಾಂತವಾಗಿದೆ. ಶೂಟ್ ಆ್ಯಟ್ ಸೈಟ್ ಕ್ರಮದ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದರು.
ರಾಯಚೂರು ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ ಪ್ರಕರಣ ಬಗ್ಗೆ ಈಗಾಗಲೇ ತನಿಖೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಸಭೆ ಚುನಾವಣೆ ಗೆಲುವು: ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ ಶ್ಲಾಘನೆ