Select Your Language

Notifications

webdunia
webdunia
webdunia
webdunia

ಅಂಬರೀಶ್ ನಿಧನಕ್ಕೆ ಸಂತಾಪ ಸೂಚಿಸಿದ ರಾಜಕೀಯ ಗಣ್ಯರು

ಅಂಬರೀಶ್ ನಿಧನಕ್ಕೆ ಸಂತಾಪ  ಸೂಚಿಸಿದ ರಾಜಕೀಯ ಗಣ್ಯರು
ಬೆಂಗಳೂರು , ಭಾನುವಾರ, 25 ನವೆಂಬರ್ 2018 (08:48 IST)
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ರಾಜಕೀಯ ರಂಗದ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ,’ ಹಿರಿಯ ನಟ, ಮಾಜಿ ಸಚಿವ ಮತ್ತು ದೀರ್ಘಕಾಲದ ನನ್ನ ಗೆಳೆಯ ಅಂಬರೀಷ್ ಅವರ ಸಾವು ದಿಗ್ಭ್ರಮೆ‌ ಉಂಟು ಮಾಡಿದೆ. ತೀರಾ ಅನಿರೀಕ್ಷಿತ ಸಾವು. ಚಿತ್ರರಂಗ ಮತ್ತು ರಾಜಕೀಯರಂಗ ಎರಡರಲ್ಲಿಯೂ ಜನಮನ ಗೆದ್ದ ನಾಯಕ ಅಂಬರೀಷ್.‌ ನಿಜವಾದ ಅರ್ಥದಲ್ಲಿ‌ ಅಜಾತಶತ್ರು. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿ ಎಂದು ಟ್ವೀಟ್ ಮಾಡಿದ್ದಾರೆ.


ಹಿರಿಯ ನಟ, ಮಾಜಿ ಸಚಿವ ಅಂಬರೀಷ್ ಅವರ ಸಾವಿನಿಂದ ಅವರ ಅಪಾರ ಅಭಿಮಾನಿಗಳಿಗಾಗಿರುವ ಆಘಾತ, ದು:ಖ, ನೋವುಗಳನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ.‌ ಈ ಸಂದರ್ಭದಲ್ಲಿ ಎಲ್ಲರೂ ಶಾಂತಿ‌ ಮತ್ತು ಸಂಯಮವನ್ನು ಕಾಪಾಡಿಕೊಂಡು ಮೃತ ನಾಯಕನಿಗೆ ಅಂತಿಮ ಗೌರವ ಸಲ್ಲಿಸಿ ಎಂದು ಸಿದ್ದರಾಮಯ್ಯ ಮನವಿಮಾಡಿದ್ದಾರೆ.


ಮಂಡ್ಯದ ಘೋರ ದುರಂತವೊಂದನ್ನು ಕೇಳಿದ ನಂತರ ಇದೀಗ ರಾಜಕೀಯವಾಗಿ ನನ್ನ ಜೊತೆ ಹೆಜ್ಜೆ ಹಾಕಿದ್ದ ಅಂಬರೀಶ್ ಅವರು ಸಹಾ ಇನ್ನಿಲ್ಲ ಎನ್ನುವ ಸುದ್ದಿ ಬರಸಿಡಿಲಿನಂತೆ ಬಂದೆರಗಿದೆ. ಇದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕರ್ನಾಟಕವು ಅಮೂಲ್ಯವಾದ ರತ್ನವನ್ನು ಕಳೆದುಕೊಂಡಿದ್ದು, ನಮ್ಮನ್ನು ಅಗಲಿರುವ ಅಂಬರೀಶ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.


ಅಂಬರೀಶ್ ನಿಧನಕ್ಕೆ ಸಂತಾಪ ಸೂಚಿಸಿದ ಡಿಸಿಎಂ ಜಿ.ಪರಮೇಶ್ವರ್ ಅವರು ಅಪಘಾತದ ನೋವನ್ನು ಜೀರ್ಣಿಸಿಕೊಳ್ಳುತ್ತಿರುವಾಗಲೇ ಮಂಡ್ಯದ ಗಂಡೆಂದೇ ಜನಪ್ರಿಯರಾಗಿದ್ದ ಹಿರಿಯ ನಟ ಹಾಗೂ ಮಾಜಿ ಸಚಿವ ಅಂಬರೀಶ್ ಅವರ ನಿಧನ ಆಘಾತವನ್ನುಂಟು ಮಾಡಿದೆ. ರಾಜ್ಯ ಹಾಗೂ ಮಂಡ್ಯದ ಪಾಲಿಗೆ ಇಂದು ಕರಾಳ ದಿನ. ಅಂಬರೀಶ್ ಅವರ ಕುಟುಂಬಕ್ಕೆ ಭಗವಂತ ನೋವನ್ನು ಸಹಿಸುವ ಶಕ್ತಿ ನೀಡಲಿ. ಚಿತ್ರರಂಗ ಹಾಗೂ ರಾಜ್ಯ ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹಾಸ್ಟೆಲ್ ಲಿಫ್ಟಿನಲ್ಲಿ ಸ್ವಚ್ಛತಾ ಸಿಬ್ಬಂದಿಯಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ