ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಒತ್ತುವರಿ ಮಾಡಿಕೊಂಡಿರುವ ಪ್ರತಿಷ್ಠಿತರ ಕಟ್ಟಡ ತೆರವುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒಂದು ವಾರಗಳ ಗಡವು ನೀಡಿದ್ದೇನೆ ಎಂದು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ತಿಳಿಸಿದ್ದಾರೆ.
ರಾಜ್ಯ ಸಚಿವ ಸಂಪುಟದ ಇಬ್ಬರು ಸಚಿವರು ಸೇರಿದಂತೆ ರಾಜಕಾರಣಗಳು ಹಾಗೂ ಅಧಿಕಾರಿಗಳಿಂದ ಒತ್ತುವರಿಯಾಗಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಿಎಂ ಸಿದ್ದರಾಮಯ್ಯನವರು ನ್ಯಾಯಾಲಯ ಮೆಟ್ಟಿಲು ಎರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇಂತಹದೇ ಸ್ಥಾನ ಬೇಕು ಎಂದು ಮನವಿ ಮಾಡಿಕೊಂಡಿದ್ದ 20 ಅಧಿಕಾರಿಗಳ ಪೈಕಿ 11 ಅಧಿಕಾರಿಗಳಿಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರರೇ ಶಿಫಾರಸು ಮಾಡಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಿಎಂ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುತ್ತೇನೆ ಎಂದು ಹೇಳಿದರು
ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಎ.ಆರ್.ಸೀತಾರಾಂ, ಆರ್.ವಿ.ದೇವರಾಜ್, ಹ್ಯಾರಿಸ್ ಹಾಗೂ ಶಾಮನೂರು ಶಿವಶಂಕರಪ್ಪ ಸೇರಿದಂತೆ ಹಲವು ರಾಜಕಾರಣಿಗಳ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿದ್ದು, ಬೆಂಗಳೂರು ನಗರದಲ್ಲಿ 1 ಲಕ್ಷ 20 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಒತ್ತುವರಿಯಾಗಿದೆ ಎಂದು ಬಿಜೆಪಿ ಮುಖಂಡ ಮಾಜಿ ಮೇಯರ್ ಎನ್.ಆರ್.ರಮೇಶ್ ಅವರು ದಾಖಲೆ ಸಮೇತ ಆರೋಪ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ