Publish Date: Mon, 11 Sep 2023 (20:00 IST)
Updated Date: Mon, 11 Sep 2023 (19:54 IST)
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ.. ಮತ್ತೊಂದೆಡೆ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ.. ಈ ರೀತಿ ಆದರೆ ಇಡೀ ರಾಜ್ಯ ಅಧೋಗತಿಗೆ ಹೋಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ರು.