Publish Date: Wed, 28 Nov 2018 (19:17 IST)
Updated Date: Wed, 28 Nov 2018 (19:18 IST)
ಹಿರಿಯ ನಟ ಹಾಗೂ ದಿ. ರೆಬೆಲ್ ಸ್ಟಾರ್ ಅಂಬರೀಶ್ ಅವರ ಸಮಾಧಿ ಸ್ಥಳದಲ್ಲಿಂದು ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿ ಹಾಲು-ತುಪ್ಪ ಹಾಕಿದರು.
ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಸೇರಿದಂತೆ ಕುಟುಂಬದ ಸದಸ್ಯರು ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸಿ ಚಿತಾಭಸ್ಮವನ್ನು ತೆಗೆದುಕೊಂಡು ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.
ಈ ಮೂಲಕ ಅಂಬರೀಶ್ ಅವರ ಅಸ್ತಿ ಸಂಗಮದಲ್ಲಿ ಲೀನವಾಯಿತು.
ಇದಕ್ಕೂ ಮುನ್ನ ಬೆಳಿಗ್ಗೆ 9 ಗಂಟೆ ಸುಮಾರಿಗೆ ಕಂಠೀರವ ಸ್ಟುಡಿಯೋಗೆ ಆಗಮಿಸಿದ ಸುಮಲತಾ ಹಾಗೂ ಅಭಿಷೇಕ್ ಅವರೊಂದಿಗೆ ಆಪ್ತರಾದ ರಾಜೇಂದ್ರಸಿಂಗ್ ಬಾಬು, ರಾಕ್ಲೈನ್ ವೆಂಕಟೇಶ್, ದೊಡ್ಡಣ್ಣ, ನಟ ದರ್ಶನ್, ಚಲನಚಿತ್ರ ವಾಣಿಜ್ಯಮಂಡಳಿ ಅಧ್ಯಕ್ಷ ಚಿನ್ನೇಗೌಡ, ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು, ಶಾಸಕರಾದ ಮುನಿರತ್ನ, ಗೋಪಾಲಯ್ಯ ಸೇರಿದಂತೆ ಚಿತ್ರರಂಗದ ಅನೇಕರು ಈ ವೇಳೆ ಹಾಜರಿದ್ದರು.
ಈ ವೇಳೆ ಅಭಿಮಾನಿಗಳು ಇಂದೂ ಕೂಡ ಸಮಾಧಿ ಸ್ಥಳಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಹಿನ್ನೆಲೆಯಲ್ಲಿ ವ್ಯಾಪಕ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.