Webdunia - Bharat's app for daily news and videos

Install App

ಬಡರೋಗಿಗಳಿಗೆ ಆಸ್ಪತ್ರೆಯಲ್ಲೇ ಮತಾಂತರಕ್ಕೆ ಆಮಿಷ

Sampriya
ಮಂಗಳವಾರ, 15 ಅಕ್ಟೋಬರ್ 2024 (17:37 IST)
Photo Courtesy X
ಕಲಬುರಗಿ: ಕೇರಳ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿಯೊಬ್ಬ ಇಲ್ಲಿನ ಇಎಸ್‌ಐ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಪ್ರೇರೆಪಿಸುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 ಹಿನೋ ಡಾಲಿಚಾನ್​​ ಎಂಬ ವಿದ್ಯಾರ್ಥಿಯೊಬ್ಬ ಕ್ರೈಸ್ತ ಧರ್ಮದ ಕರಪತ್ರಗಳನ್ನು ಹಿಡಿದು ರೋಗಿಗಳ ಬಳಿ ನಿಮ್ಮ ರೋಗ ಜೌಷಧಿ ಹಾಗೂ ಇಂಜೆಕ್ಷನ್‌ನಿಂದ ವಾಸಿಯಾಗುವುದಿಲ್ಲ. ಬದಲಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಬನ್ನಿ. ಯೆಸುವಿನ ದಾರಿಯಲ್ಲಿ ನಡೆದು ನಿಮ್ಮ ರೋಗಗಳನ್ನ ದೂರ ಮಾಡಿಕೊಳ್ಳಿ ಎಂದು ಹೇಳುತ್ತಿದ್ದನು.

ಇನ್ನೂ ಈ ವಿಚಾರ ತಿಳಿದು ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಬಳಿಕ, ವಿದ್ಯಾರ್ಥಿ ಹಿನೋ ಡಾಲಿಚಾನ್​ನನ್ನು ಹಿಡಿದು ಪ್ರಶ್ನಿಸಿದಾಗ, ತಾನು ಎಂಬಿಬಿಎಸ್​ ವಿದ್ಯಾರ್ಥಿ ಎಂದು ಹೇಳಿದ್ದಾನೆ. ಅಲ್ಲದೇ ತಾನು ಕೇವಲ ಓದಲು ಪೇಪರ್​​ ನೀಡುತ್ತಿದ್ದೇನೆ ಎಂದು ಹೇಳಿದ್ದಾನೆ.

ಆಗ ಹಿಂದೂ ಸಂಘಟನೆ ಕಾರ್ಯಕರ್ತರು ವಿದ್ಯಾರ್ಥಿಯನ್ನು ಹಿಡಿದು ತಪಾಸಣೆ ನಡೆಸಿದಾಗ, ಆತನ ಬ್ಯಾಗ್​ನಲ್ಲಿ ಕ್ರೈಸ್ತ್​ ಧರ್ಮದ ಕೆಲ ಅಂಶಗಳು ಮಳಯಾಳಂ ಮತ್ತು ಕನ್ನಡದಲ್ಲಿ ಬರೆದಿರುವ ಪುಸ್ತಕ ಪತ್ತೆಯಾಗಿದೆ.

ಹಿನೋ ನಡೆಗೆ ಹಿಂದೂ ಕಾರ್ಯಕರ್ತರು ತೀವ್ರ ತರಾಟೆಗೆ ತೆಗೆದುಕೊಂಡರು. ಮತಾಂತರಕ್ಕೆ ಯತ್ನಿಸಿದ ವಿದ್ಯಾರ್ಥಿ ಹಿನೋ ಡಾಲಿಚಾನ್ ವಿರುದ್ಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಗುಲ್ಬರ್ಗಾ ವಿವಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments