Publish Date: Sat, 30 Oct 2021 (20:23 IST)
Updated Date: Sat, 30 Oct 2021 (20:32 IST)
ಪುನೀತ್ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಕಾರ್ಯಕ್ರಮವನ್ನು ನಾಳೆ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಅಪಾರ ಅಭಿಮಾನಿಗಳು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಪುನೀತ್ ಅವರನ್ನು ಕೊನೆಯದಾಗಿ ನೋಡಲೇಬೇಕು ಎಂದು ಒತ್ತಡ ಹಾಕುತ್ತಿದ್ದಾರೆ.ಆದ್ದರಿಂದ ಇಂದು ನಡೆಯಬೇಕಿದ್ದ ಅಂತ್ಯ ಸಂಸ್ಕಾರ ಕಾರ್ಯಕ್ರಮವನ್ನು ನಾಳೆಗೆ ಮುಂದೂಡಲಾಗಿದೆ.
ನಾಳೆ ಅಂತ್ಯಕ್ರಿಯೆಯ ಸಮಯ ಇನ್ನೂ ನಿಗಧಿಯಾಗಿಲ್ಲ. ಮುಖ್ಯಮಂತ್ರಿಗಳು ಸಮಯವನ್ನು ಪ್ರಕಟಿಸಲಿದ್ದಾರೆ. ನಾವು ಸಂಸ್ಕಾರಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ.