Select Your Language

Notifications

webdunia
webdunia
webdunia
webdunia

ಬೆಂಗಳೂರು ನಗರದ ಸಾಕಷ್ಟು ಕಡೆಗಳಲ್ಲಿ ವಿದ್ಯುತ್ ಕಡಿತ

Power cuts
bangalore , ಶುಕ್ರವಾರ, 17 ಜೂನ್ 2022 (19:43 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ಹಲವೆಡೆ ಕಾಮಗಾರಿಗಳು ನಡೆಯುತ್ತಿವೆ. ಹಾಗಾಗಿ ಬೆಂಗಳೂರು ನಗರದ ಸಾಕಷ್ಟು ಕಡೆಗಳಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಮಳೆಗಾಲದಲ್ಲಿ ವಿದ್ಯುತ್ ಕಡಿತ  ಸಾಮಾನ್ಯ. ಮಳೆ ಗಾಳಿಗೆ ಅಲ್ಲಲ್ಲಿ ಮರ ಗಿಡಗಳು ಬೀಳುವುದು, ವಿದ್ಯುತ್ ಲೈನ್ ಗಳು ಕಟ್ ಆಗುವುದು ವಿದ್ಯುತ್ ಕಡಿತಕ್ಕೆ ಕಾರಣವಾಗಲಿದೆ. ಇದು ಜನರನ್ನು ಹೈರಾಣಾಗಿಸಲಿದೆ. ಮಳೆಯ ಅವಾಂತರ ಜೊತೆಗೆ ವಿದ್ಯುತ್ ಕಡಿತ ಜನರನ್ನು ರೋಸಿ ಹೋಗುವಂತೆ ಮಾಡಿದೆ. ಜೂನ್ 17 ಮತ್ತು ಜೂನ್ 18 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಆಗಲಿದೆ. ಬೆಂಗಳೂರಿನ ಜಯನಗರದ ದಕ್ಷಿಣ ವಲಯ, ಉತ್ತರ ವಲಯ, ಪೂರ್ವ ಮತ್ತು ಪಶ್ಚಿಮ ವಲಯಗಳಲ್ಲಿ ಕಡಿತ ಗೊಳಿಸುವ ಸಾದ್ಯತೆ ಇದೆ. ಬೆಸ್ಕಾಂ ನಗರದ ಹಲವೆಡೆ ವಿದ್ಯುತ್ ಕಡಿತ ಮಾಡುವ ಮೂಲಕ ಶಾಕ್ ನೀಡುತ್ತಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯಲ್ಲಿ ಭೂಕಂಪನ