Publish Date: Thu, 06 Jul 2017 (16:59 IST)
Updated Date: Thu, 06 Jul 2017 (17:02 IST)
ಮುಖ್ಯಮಂತ್ರಿಯಾಗಿದ್ದಾಗ ನಡೆದಿದೆ ಎನ್ನಲಾದ ವಿದ್ಯುತ್ ಹಗರಣ ಕುರಿತಂತೆ ಯಾವುದೇ ತನಿಖೆ ಎದುರಿಸಲು ಸಿದ್ದ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ವಿದ್ಯುತ್ ಖರೀದಿಯಲ್ಲಿ 25 ಸಾವಿರ ಕೋಟಿ ರೂಪಾಯಿ ಹಗರಣವಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ನನ್ನ ವಿರುದ್ಧ ಆರೋಪ ಹೊರಿಸಿದ್ದರು. ಕಾಂಗ್ರೆಸ್ ಪಕ್ಷದ ಸರಕಾರವೇ ಅಧಿಕಾರದಲ್ಲಿದ್ದರೂ ಡಿಕೆಶಿ ಇನ್ನೂ ಸುಮ್ಮನಿರುವುದು ಏಕೆ? ಎಂದು ಗುಡುಗಿದರು.
ನಾನು ತಪ್ಪು ಮಾಡಿದ್ದರೆ ನನ್ನ ವಿರುದ್ಧ ಯಾಕೆ ತನಿಖೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ನನ್ನ ಅವಧಿಯಲ್ಲಿನ ಇಂಧನ ಇಲಾಖೆ ನಿರ್ಧಾರಗಳ ಬಗ್ಗೆ ತನಿಖೆಯಾಗಲಿ ಎಂದು ಸವಾಲ್ ಹಾಕಿದರು.
ಸಚಿವರು ಸದನ ಸಮಿತಿಯ ಅಧ್ಯಕ್ಷರಾಗಬಾರದು. ಆದರೆ, ಇಂಧನ ಸಚಿವರು ಸದನ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಇದರಿಂದಾಗಿ ಕುರಿಕಾಯಲು ತೋಳ ಬಿಟ್ಟಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಧರ್ಮಸಿಂಗ್ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಿದ್ಯುತ್ ಖರೀದಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಿ. ಯಾವುದೇ ತನಿಖೆಗೆ ಸಿದ್ದವಾಗಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.