ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನಲೆ; ಶುಭ ಹಾರೈಸಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಜಿಟಿಡಿ

ಮಂಗಳವಾರ, 17 ಸೆಪ್ಟಂಬರ್ 2019 (11:15 IST)
ಮೈಸೂರು : ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭ ಹಾರೈಸಿ ಮೈಸೂರು ಉಸ್ತುವಾರಿ ಸಚಿವ ವಿ. ಸೋಮಣ್ಣ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಈ ಪೂಜೆಗೆ  ಸಂಸದ ಪ್ರತಾಪ್ ಸಿಂಹ, ಎಲ್. ನಾಗೇಂದ್ರ ಅವರು ಕೂಡ ಪೂಜೆಯಲ್ಲಿ ಭಾಗಿಯಾಗಿದ್ದರು.


ಇದೇ ವೇಳೆ ಆಗಮಿಸಿದ .ಟಿ ದೇವೇಗೌಡ ಅವರು ಬಿಜೆಪಿ ನಾಯಕರ ಜೊತೆ ಪೂಜೆಯಲ್ಲಿ ಭಾಗಿಯಾಗಿದ್ದು, ನರೇಂದ್ರ ಮೋದಿ, ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ಹೆಸರಿನಲ್ಲಿ ಅರ್ಚನೆ ಕೂಡ ಮಾಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಇಂದು ಡಿಕೆಶಿಗೆ ಸಿಗುತ್ತಾ ಇಡಿ ಕಸ್ಟಡಿಯಿಂದ ಮುಕ್ತಿ?