Webdunia - Bharat's app for daily news and videos

Install App

ಅಧಿಕಾರಿಗಳೊಂದಿಗೆ ಪ್ರಹ್ಲಾದ್​​​​ ಜೋಶಿ ಸಭೆ

Webdunia
ಶುಕ್ರವಾರ, 11 ನವೆಂಬರ್ 2022 (17:10 IST)
ಕಲ್ಲಿದ್ದಲಿನ ವಿವಿಧ ಯೋಜನೆಗಳ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಹಿರಿಯ ಅಧಿಕಾರಿಗಳ ಜೊತೆ ನಿನ್ನೆ ದೆಹಲಿಯಲ್ಲಿ ಸಭೆ ನಡೆಸಿದ್ದಾರೆ. ಕಲ್ಲಿದ್ದಲು ಲಿಗ್ನೈಟ್​​​​ನಿಂದ ನವೀಕರಿಸಬಹುದಾದ ಇಂಧನ ಯೋಜನೆಗಳ ಪ್ರಸ್ತುತ ಸ್ಥಿತಿಗಳ ಕುರಿತಂತೆ ಸಭೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೋಲ್ ಇಂಡಿಯಾ ಲಿಮಿಟೆಡ್ ಮತ್ತು NLC ಇಂಡಿಯಾ ಲಿಮಿಟೆಡ್‌ನ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಪ್ರಹ್ಲಾದ್​​ ಜೋಶಿಯವರು, ವೈವಿಧ್ಯೀಕರಣ ಯೋಜನೆಗಳಿಗೆ ವೇಗ ನೀಡುವಂತೆ ಸೂಚನೆ ನೀಡಿದರು. ಭಾರತದ ಹವಾಮಾನಕ್ಕೆ ಅನುಗುಣವಾಗಿ, ಲಿಗ್ನೈಟ್ ಕಂಪನಿಗಳು ನವೀಕರಿಸಬಹುದಾದ ಇಂಧನಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಥರ್ಮಲ್ ಪವರ್ ಜೊತೆಗೆ ಕಲ್ಲಿದ್ದಲು ಗ್ಯಾಸಿಫಿಕೇಶನ್ ಯೋಜನೆ ಮಹತ್ವದ್ದು ಎಂದು ಅಧಿಕಾರಿಗಳಿಗೆ ಹೇಳಿದರು. ನ್ಯಾಚುರಲ್ ಗ್ಯಾಸ್ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುತ್ತಲೇ ಇದೆ. ಹೀಗಿರುವಾಗ ಭಾರತ ಗ್ಯಾಸ್ ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಹೊಂದಬೇಕು. ಕಲ್ಲಿದ್ದಲು ಮತ್ತು ಲಿಗ್ನೈಟ್​​ನಿಂದ ಗ್ಯಾಸ್ ತಯಾರಿಕೆ ಯೋಜನೆ ಕುರಿತು ಹೆಚ್ಚಿನ ಗಮನ ಹರಿಸುವಂತೆ ಪ್ರಹ್ಲಾದ್​​ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments