Publish Date: Mon, 18 Nov 2024 (16:32 IST)
Updated Date: Mon, 18 Nov 2024 (16:34 IST)
ಹುಬ್ಬಳ್ಳಿ: ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಆಫರ್ ನೀಡುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿದ್ದರಾಮಯ್ಯ ಅವರು ಇದೀಗ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಈ ರೀತಿಯ ಆರೋಪವನ್ನು ಮಾಡುತ್ತಿದೆ. ಬಿಜೆಪಿಯವರು ಆಫರ್ ನೀಡುತ್ತಿರುವರ ಹೆಸರನ್ನು ಕಾಂಗ್ರೆಸ್ ರಿಲೀಸ್ ಮಾಡಲಿ. ಅಂತವರ ವಿರುದ್ಧ ಭಾರತ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದರು.
ಇನ್ನೂ ಕಳೆದ ಬಾರಿ ಬಿಜೆಪಿ ಸೇರಿದ ಕಾಂಗ್ರೆಸ್‌ನ ಕೆಲ ಶಾಸಕರನ್ನು ಸ್ವತಃ ಸಿಎಂ ಸಿದ್ದರಾಮಯ್ಯನವರೇ ಕಳುಹಿಸಿದ್ದಾರೆ. ಯಾಕೆಂದರೆ ಎಚ್ ಡಿ ಕುಮಾರಸ್ವಾಮಿ ಅವರು ಅಧಿಕಾರದಲ್ಲಿ ಇರಬಾರದೆಂದು ಸ್ವತಃ ಕಾಂಗ್ರೆಸ್‌ನವರೇ ಬಿಜೆಪಿಗೆ ಸೇರುವಂತೆ ಕಳುಹಿಸಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಆರೋಪವನ್ನು ಮಾಡಿದರು.
ಈ ಬಾರಿ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ನಾವು ರಚನಾತ್ಮಕವಾಗಿ ವಿರೋಧ ಪಕ್ಷವನ್ನು ಮುನ್ನಡೆಸಬೇಕೆಂಬುದು ನಮ್ಮ ಸ್ಪಷ್ಟ ನಿರ್ಧಾರ. ಇದೀಗ ತಮ್ಮ ಹುಳುಕನ್ನು ಮುಚ್ಚಿಕೊಳ್ಳಲು, ಯಾವುದೇ ದಾಖಲೆಯಿಲ್ಲದೆ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.