Webdunia - Bharat's app for daily news and videos

Install App

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ದೇವೇಗೌಡರ ಕುಟುಂಬ ರಾಜಕೀಯಕ್ಕೆ ರಾಜೀನಾಮೆಗೆ ವೀರಪ್ಪ ಮೊಹ್ಲಿ ಆಗ್ರಹ

Sampriya
ಗುರುವಾರ, 2 ಮೇ 2024 (18:54 IST)
Photo Courtesy X
ಬೆಳಗಾವಿ:  ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ವಿಚಾರ ಎಚ್‌.ಡಿ.ದೇವೇಗೌಡ ಹಾಗೂ ಅವರ ಇಡೀ ಕುಟುಂಬ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಆಗ್ರಹಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ ಇಡೀ ಸಮಾಜವೇ ತಲೆ ತಗ್ಗಿಸುವ ವಿಚಾರ. ವಿಡಿಯೊ ಬಿಡುಗಡೆಯಲ್ಲಿ ಯಾರ ಪಾತ್ರವಿದೆ ಎಂಬುದು ಮುಖ್ಯವಲ್ಲ. ಯಾರು ತಪ್ಪು ಮಾಡಿದ್ದಾರೆ.  ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊರಬೇಕು ಎಂದರು.

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಒಂದು ದೇಶ, ಒಂದು ಚುನಾವಣೆ ಮತ್ತು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಬಹುದು. 2029ರಲ್ಲಿ ಚುನಾವಣೆಯೇ ನಡೆಯುವುದಿಲ್ಲ ಎಂಬ ಭಯವೂ ನಮಗಿದೆ ಎಂದರು.

ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್ ಡಿ ರೇವಣ್ಣ ವಿರುದ್ಧ ಮಾಜಿ ಮನೆ ಕೆಲಸದಾಕೆ ದೂರನ್ನು ನೀಡಿದ್ದಾರೆ. ಇದೀಗ ಎಸ್‌ಐಟಿ ಈ ತನಿಖೆಯನ್ನು ವಹಿಸಿಕೊಂಡಿದ್ದು, ಪ್ರಜ್ವಲ್ ರೇವಣ್ಣ ಹಾಗೂ ಎಚ್ ಡಿ ರೇವಣ್ಣ ಕೂಡಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ