ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Sampriya
ಬುಧವಾರ, 3 ಡಿಸೆಂಬರ್ 2025 (14:32 IST)
ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಬೆನ್ನಲ್ಲೇ ಅವರ ಸಹೋದರ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಬಿಗ್‌ಶಾಕ್‌ ಎದುರಾಗಿದೆ. 

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಶಿಕ್ಷೆ ಅಮಾನತುಗೊಳಿಸುವಂತೆ ಕೋರಿದ್ದ ಅವರ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್‌ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.  

ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಹಾಗೂ ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠವು ಬುಧವಾರ ಈ ಮಹತ್ವದ ಆದೇಶ ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ಅವರಿಗೆ ಜೈಲು ವಾಸದಿಂದ ಸದ್ಯಕ್ಕೆ ಬಿಡುಗಡೆ ಭಾಗ್ಯ ದೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಗಂಭೀರ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಳೆದ ಆಗಸ್ಟ್ 2025ರಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಘೋಷಿಸಿತ್ತು. ನ್ಯಾಯಾಲಯವು ಅವರಿಗೆ ಜೀವಿತಾವಧಿ ಕಠಿಣ ಜೈಲು ಶಿಕ್ಷೆ ಮತ್ತು ₹11 ಲಕ್ಷಕ್ಕೂ ಅಧಿಕ ದಂಡ ವಿಧಿಸಿ ಆದೇಶ ಹೊರಡಿಸಿತ್ತು. 

ವಿಶೇಷ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ಬಾಕಿ ಇರುವಾಗಲೇ, ತಮಗೆ ವಿಧಿಸಲಾದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು, ಜಾಮೀನು ನೀಡುವಂತೆ ಪ್ರಜ್ವಲ್ ಪರ ಹಿರಿಯ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments