Webdunia - Bharat's app for daily news and videos

Install App

ಬೆಂಗಳೂರಿಗೆ ಬರುವ ಮೊದಲೇ ಜಾಮೀನು ಅರ್ಜಿ ಹಾಕಿ ರೆಡಿ ಆದ್ರು ಪ್ರಜ್ವಲ್ ರೇವಣ್ಣ

Krishnaveni K
ಗುರುವಾರ, 30 ಮೇ 2024 (09:51 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಬಂಧನ ಭೀತಿಯಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ವಿದೇಶದಿಂದ ನಾಳೆ ಬೆಂಗಳೂರಿಗೆ ಬರುತ್ತಿದ್ದಾರೆ. ಆದರೆ ಬೆಂಗಳೂರಿಗೆ ಬರುವ ಮೊದಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಇಷ್ಟು ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದರು. ಇದೀಗ ರಾಜಕೀಯ, ಕುಟುಂಬ ಸದಸ್ಯರ ಒತ್ತಡಕ್ಕೆ ಮಣಿದು ಬೆಂಗಳೂರಿಗೆ ಬರುತ್ತಿದ್ದಾರೆ.

ಆದರೆ ಅವರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೇ ಅವರನ್ನು ಬಂಧಿಸಲು ಎಸ್ಐಟಿ ತಂಡ ಸಜ್ಜಾಗಿದೆ. ಆದರೆ ಬಂಧನ ಭೀತಿಯಿಂದ ಪ್ರಜ್ವಲ್ ತಮ್ಮ ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ತ್ವರಿತ ವಿಚಾರಣೆಗೆ ಪ್ರಜ್ವಲ್ ಪರ ವಕೀಲರು ಆಗ್ರಹಿಸಿದ್ದರು. ಆದರೆ ಕೋರ್ಟ್ ಅದನ್ನು ನಿರಾಕರಿಸಿದೆ.

ಮೊನ್ನೆಯಷ್ಟೇ ವಿಡಿಯೋ ಸಂದೇಶ ನೀಡಿದ್ದ ಪ್ರಜ್ವಲ್ ಮೇ 31 ಕ್ಕೆ ಬೆಂಗಳೂರಿಗೆ ಬರುವುದಾಗಿ ಹೇಳಿದ್ದರು. ಅವರು ಹಂಗೇರಿಯಿಂದ ವಿಡಿಯೋ ಮಾಡಿದ್ದರು ಎಂದು ಎಸ್ಐಟಿ ತಂಡ ಪತ್ತೆ ಹೆಚ್ಚಿದೆ.  ವಿಮಾನ ಟಿಕೆಟ್ ಬುಕಿಂಗ್ ನಲ್ಲಿ ಪ್ರಜ್ವಲ್ ತಮ್ಮ ಮೊಬೈಲ್ ನಂಬರ್, ಈಮೇಲ್ ವಿವರ ನೀಡದೇ ಎಸ್ಐಟಿಗೆ ಚಳ್ಳೇ ಹಣ್ಣು ತಿನಿಸುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ವಿಡಿಯೋ ಐಪಿ ಅಡ್ರೆಸ್ ಹುಡುಕಿ ಹಂಗೇರಿಯಿಂದ ವಿಡಿಯೋ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಆದರೂ ಈ ವಿಡಿಯೋ ಲೈವ್ ಆಗಿರಲಿಲ್ಲ. ಎರಡು ದಿನ ಮೊದಲು ರೆಕಾರ್ಡ್ ಮಾಡಿರುವುದನ್ನು ಅಪ್ ಲೋಡ್ ಮಾಡಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿತ್ತು. ಹೀಗಾಗಿ ಪ್ರಜ್ವಲ್ ಯಾವ ದೇಶದಿಂದ ಬರುತ್ತಿದ್ದಾರೆ ಎನ್ನುವುದು ಖಚಿತವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ