ಪ್ರಜ್ವಲ್ ರೇವಣ್ಣಗೆ ಜುಲೈ 30 ಮಹತ್ವದ ದಿನ: ಮಗನಿಗಾಗಿ ರೇವಣ್ಣ ಭೀಷ್ಮ ಪ್ರತಿಜ್ಞೆ

Krishnaveni K
ಶನಿವಾರ, 19 ಜುಲೈ 2025 (10:56 IST)
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 30 ಕ್ಕೆ  ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಲಿದೆ. ಇದೀಗ ಮಗನಿಗಾಗಿ ಎಚ್ ಡಿ ರೇವಣ್ಣ ಭೀಷ್ಮ ಪ್ರತಿಜ್ಞೆಯೊಂದನ್ನು ಮಾಡಿದ್ದಾರೆ.

ಹಾಸನದ ತೋಟದ ಮನೆ, ಸಂಸದರ ನಿವಾಸ ಸೇರಿದಂತೆ ಹಲವು ಕಡೆ ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರೊಂದಿಗೆ ಲೈಂಗಿಕ ದೌರ್ಜನ್ಯ, ಅತ್ಯಾಚಾರವೆಸಗಿದ ಆರೋಪದಡಿ ಬಂಧನವಾಗಿ ವರ್ಷವೇ ಕಳೆದಿದೆ.  ಈಗಾಗಲೇ ತನಿಖಾ ತಂಡ ಚಾರ್ಜ್ ಶೀಟ್ ಸಲ್ಲಿಕೆ ಮಾಡಿ ಎರಡೂ ಕಡೆ ಲಾಯರ್ ಗಳು ವಾದ-ಪ್ರತಿವಾದ ಮಂಡಿಸಿದ್ದಾಗಿದೆ.

ಇದೀಗ ತೀರ್ಪಿನ ಸಮಯ. ಜುಲೈ 30 ಕ್ಕೆ ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ತೀರ್ಪು ನೀಡಲಿದೆ. ಇದೀಗ ಪ್ರಜ್ವಲ್ ಮಾತ್ರವಲ್ಲ ರೇವಣ್ಣ ಕುಟುಂಬಕ್ಕೇ ಎದೆಯೊಳಗೆ ಢವ ಢವ ಶುರುವಾಗಿದೆ. ತೀರ್ಪು ಏನಾಗುವುದೋ ಎಂಬ ಆತಂಕವಿದೆ.

ಈ ನಡುವೆ ಮಗನಿಗಾಗಿ ಎಚ್ ಡಿ ರೇವಣ್ಣ ಶಪಥವೊಂದನ್ನು ಮಾಡಿದ್ದಾರೆ. ಎಚ್ ಡಿ ರೇವಣ್ಣ ಸ್ವಲ್ಪ ಧಾರ್ಮಿಕ ನಂಬಿಕೆಯುಳ್ಳ ವ್ಯಕ್ತಿ. ಈಗ ಮಗನ ಬಿಡುಗಡೆಗಾಗಿ ದೇವರ ಮೊರೆ ಹೋಗಿದ್ದು ಮಗ ಬಿಡುಗಡೆಯಾಗುವವರೆಗೂ ಮಾಂಸ ಮುಟ್ಟಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಪ್ರಜ್ವಲ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದರೆ ಕನಿಷ್ಠ 10 ವರ್ಷ ಅಥವಾ ಗರಿಷ್ಠ ಜೀವಾವಧಿ ಶಿಕ್ಷೆಗೂ ಒಳಗಾಗಬಹುದು. ಹೀಗಾಗಿ ರೇವಣ್ಣ ಕುಟುಂಬದಲ್ಲಿ ಆತಂಕವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ