Select Your Language

Notifications

webdunia
webdunia
webdunia
webdunia

ಪ್ರಜ್ವಲ್ ಸ್ಪರ್ಧೆಗೆ ಎಚ್‌.ಡಿ.ಕುಮಾರಸ್ವಾಮಿ ತೀರ್ಮಾನವೇ ಅಂತಿಮ: ಎಚ್.ಡಿ.ರೇವಣ್ಣ

prajwal revanna
ಹಾಸನ , ಶುಕ್ರವಾರ, 10 ನವೆಂಬರ್ 2017 (15:19 IST)
ಪುತ್ರ ಪ್ರಜ್ವಲ್ ವಿಧಾನಸಭೆ ಚುನಾವಣೆ ಸ್ಪರ್ಧೆ ಕುರಿತಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತೀರ್ಮಾನವೇ ಅಂತಿಮ ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಪ್ರಜ್ವಲ್ ಸ್ಪರ್ಧೆ ಕುರಿತಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕುಟುಂಬದಲ್ಲಿ ಭಿನ್ನಮತ, ಗೊಂದಲವಿದೆ. ಹೊಡೆದಾಡಿಕೊಳ್ಳುತ್ತಿದ್ದಾರೆ ಎಂದು ಯಾರಾದರೂ ಭಾವಿಸಿದಲ್ಲಿ ಅದೊಂದು ಭ್ರಮೆಯಾಗಲಿದೆ ಎಂದು ತಿಳಿಸಿದ್ದಾರೆ.
 
ನಾನು ಜೆಡಿಎಸ್ ಪಕ್ಷದ ಶಾಸಕನಾಗಲು 18 ವರ್ಷಗಳು ಬೇಕಾಯಿತು. ಪ್ರಜ್ವಲ್ ಇನ್ನೂ ಯುವಕ. ಮುಂದೆ ತುಂಬಾ ಭವಿಷ್ಯವಿದೆ. ಸೂಕ್ತ ಸಮಯದಲ್ಲಿ ಆತನ ಸ್ಪರ್ಧೆಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
 
ಸದ್ಯ ಪ್ರಜ್ವಲ್, ತಾತಾ ಏನು ಹೇಳುತ್ತಾರೋ ಅದನ್ನು ಮಾಡುತ್ತೇನೆ ಎಂದು ತಿಳಿಸಿದ್ದಾನೆ. ತಾತನ ಆದೇಶದಂತೆ ಪಕ್ಷ ಸಂಘಟನೆಗಾಗಿ ದುಡಿಯುತ್ತಿದ್ದಾನೆ ಎಂದು ಎಚ್.ಡಿ.ರೇವಣ್ಣ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ ಓರ್ವ ಬಚ್ಚಾ: ಯಡಿಯೂರಪ್ಪ ವಾಗ್ದಾಳಿ