Select Your Language

Notifications

webdunia
webdunia
webdunia
webdunia

ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ಇಂದು

ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ಇಂದು
ಹಾಸನ , ಶುಕ್ರವಾರ, 22 ಮಾರ್ಚ್ 2019 (11:39 IST)
ಹಾಸನ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ದರ್ಶನಕ್ಕೆ ಮೊರೆ ಹೋಗಿರುವ ಪ್ರಜ್ವಲ್, ಹೊಳೆನರಸೀಪುರದ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನ, ಮನೆ ದೇವರು ಹರದನಹಳ್ಳಿ ಶಿವನ ದೇವಾಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ.
ದೇವಸ್ಥಾನಗಳಲ್ಲಿ ಬಿ ಫಾರ್ಮ್ ಗೆ  ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದ ಪ್ರಜ್ವಲ್ ರೇವಣ್ಣ ಆ ಬಳಿಕ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ತೆರಳಲಿದ್ದಾರೆ.  

ಪ್ರಜ್ವಲ್ ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಲೋಕೋಪಯೋಗಿ ಸಚಿವ HD ರೇವಣ್ಣ , ಜಿಲ್ಲಾ ಪಂಚಾಯತ್ ಸದಸ್ಯೆ ಭವಾನಿ ರೇವಣ್ಣ ಹಾಗೂ ಸಕಲೇಶಪುರ ಶಾಸಕರ HK ಕುಮಾರಸ್ವಾಮಿ ಸಾಥ್ ನೀಡಲಿದ್ದಾರೆ.
ಇಂದು ಮಧ್ಯಾಹ್ನ 12:30ಕ್ಕೆ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಸುವವರಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

‘ಡಿ ಬಾಸ್’ ದರ್ಶನ್ ಗೆ ದಾಳಿ ಎಚ್ಚರಿಕೆ ನೀಡಿದ್ದ ಜೆಡಿಎಸ್ ಶಾಸಕರ ವಿರುದ್ಧ ಎಫ್ ಐಆರ್