ವಿಡಿಯೋ ಪ್ರಕರಣ ಬೆನ್ನಲ್ಲೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ

Krishnaveni K
ಸೋಮವಾರ, 29 ಏಪ್ರಿಲ್ 2024 (09:30 IST)
Photo Courtesy: Twitter
ಬೆಂಗಳೂರು: ಮನೆಕೆಲಸದಾಕೆಯಿಂದ ದೌರ್ಜನ್ಯ ಆರೋಪ ಕೇಳಿಬರುತ್ತಿದ್ದಂತೇ ಜೆಡಿಎಸ್ ನಾಯಕ, ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದಾರೆ ಎನ್ನಲಾಗಿದೆ.

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಎಚ್ ಡಿ ರೇವಣ್ಣ ಹೆಸರು ಕೇಳಿಬಂದಿದೆ. ಅವರ ಮನೆಯಲ್ಲಿ ಈ ಹಿಂದೆ ಕೆಲಸ ಮಾಡಿಕೊಂಡಿದ್ದ ಮಹಿಳೆಯೇ ಆರೋಪ ಮಾಡಿದ್ದಾಳೆ. ತಂದೆ-ಮಗ ಇಬ್ಬರೂ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಹೇಳಿದ್ದಳು. ಅವರ ಮನೆಯಲ್ಲಿ ಕೆಲಸ ಮಾಡುವ ಇತರೆ ಮಹಿಳೆಯರೂ ಇದೇ ಕಾರಣಕ್ಕೆ ಅಲ್ಲಿ ಕೆಲಸ ಮಾಡಲು ಭಯ ಪಡುತ್ತಿದ್ದರು ಎಂದಿದ್ದಳು.

ಈ ಘಟನೆ ಬಯಲಿಗೆ ಬರುತ್ತಿದ್ದಂತೇ ಸಿಎಂ ಸಿದ್ದರಾಮಯ್ಯ ಘಟನೆ ಕುರಿತಂತೆ ಎಸ್ ಐಟಿ ತನಿಖೆಗೆ ಆದೇಶ ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ  ವಿಡಿಯೋ ತುಣುಕು ಹರಿದಾಡುತ್ತಿದ್ದು ಮೇಲ್ನೋಟಕ್ಕೆ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದು ಕಂಡುಬಂದಿದೆ. ಹೀಗಾಗಿ ಘಟನೆ ಸಮಗ್ರ ತನಿಖೆ ನಡೆಸಲು ಎಸ್ ಐಟಿಗೆ ಆದೇಶಿಸಲಾಗಿದೆ ಎಂದಿದ್ದಾರೆ.

ರಾಜ್ಯ ಸರ್ಕಾರ ಪ್ರಕರಣವನ್ನು ಎಸ್ ಐಟಿಗೆ ಒಪ್ಪಿಸುತ್ತಿದ್ದಂತೇ ಇತ್ತ ಪ್ರಜ್ವಲ್ ರೇವಣ್ಣ ಜರ್ಮನಿ ವಿಮಾನವೇರಿದ್ದಾರೆ. ಶನಿವಾರ ಅಪರಾಹ್ನವೇ ಅವರು ಫ್ರಾಂಕ್ ಫ್ರೂಟ್ ವಿಮಾನವೇರಿದ್ದಾರೆ ಎನ್ನಲಾಗಿದೆ. ಮನೆಯಲ್ಲಿ 6 ಜನ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿದ್ದರು. ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದೇ ಇದ್ದಾಗ ರೇವಣ್ಣ ಮತ್ತು ಪುತ್ರ ಪ್ರಜ್ವಲ್ ರೇವಣ್ಣ ನೆಪ ಹೇಳಿಕೊಂಡು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಳು. ಈ ಪ್ರಕರಣವೀಗ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ