Select Your Language

Notifications

webdunia
webdunia
webdunia
webdunia

ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ಸಿಕ್ತು ತಾತ್ಕಾಲಿಕ ರಿಲೀಫ್‌: ಭವಾನಿ ರೇವಣ್ಣಗೆ ಮುಂದುವರಿದ ಟೆನ್ಷನ್‌

former MP Prajwal Revanna

Sampriya

ಬೆಂಗಳೂರು , ಗುರುವಾರ, 9 ಜನವರಿ 2025 (14:10 IST)
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ಅವರಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ.

ಪ್ರಕರಣ ರದ್ದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ.

ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್‌ ಸಿಕ್ಕಿದೆ.  

ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ, ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಮತ್ತೊಂದೆಡೆ ಪ್ರಜ್ವಲ್ ರೇವಣ್ಣ ಅವರ ಅತ್ಯಾಚಾರ ಕೇಸಿಗೆ ಸಂಬಂಧಿಸಿದ ಕೆ.ಆರ್.ನಗರದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ತನ್ನ ಹೆಸರು ಕೈಬಿಡುವಂತೆ ಭವಾನಿ ರೇವಣ್ಣ ಕೂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯ ಕುರಿತು ಅಂತಿಮ ವಾದ-ಪ್ರತಿವಾದ ಆಲಿಸಲು ದಿನಾಂಕ ನಿಗದಿ ಮಾಡಲಾಗಿದೆ.

ಫೆ.17ಕ್ಕೆ ಅರ್ಜಿ ಇತ್ಯರ್ಥ ಪಡಿಸುವುದಾಗಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಿಂದ ತಿಳಿಸಲಾಗಿದೆ. ಈ ಮೂಲಕ ಭವಾನಿ ರೇವಣ್ಣ ಅವರ ಮೇಲಿನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯನ್ನು ಫೆ.17ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Tirupati Stampede: ತಿರುಪತಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಕಾಂಗ್ರೆಸ್ ವಿರೋಧ