Select Your Language

Notifications

webdunia
webdunia
webdunia
webdunia

ಪ್ರಜ್ವಲ್‌ ರೇವಣ್ಣಗೆ 6 ದಿನ ಎಸ್‌ಐಟಿ ಕಸ್ಟಡಿ: ತನಿಖೆಗೆ ಸ್ಪಂದಿಸುವಂತೆ ನ್ಯಾಯಾಲಯ ಸೂಚನೆ

Prajwal Revanna

sampriya

ಬೆಂಗಳೂರು , ಶುಕ್ರವಾರ, 31 ಮೇ 2024 (17:30 IST)
Photo By X
ಬೆಂಗಳೂರು : ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಮಾನ ಹರಾಜು ಮಾಡಿದ ಆರೋಪ ಎದುರಿಸುತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು  6 ದಿನಗಳ ಕಾಲ ಎಸ್​ಐಟಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ.

ಎಸಿಎಮ್​ಎಮ್​​ ನ್ಯಾಯಾಲಯದ ನ್ಯಾಯಧೀಶ ಎನ್​. ಶಿವಕುಮಾರ್​​ ಈ ಆದೇಶ ಹೊರಡಿಸಿದ್ದಾರೆ.  ಗುರುವಾರ ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್​ ರೇವಣ್ಣ ಅವರನ್ನು ಬಂಧಿಸಿದ್ದ ಎಸ್​ಐಟಿ ಪೊಲೀಸರು ಮೆಡಿಕಲ್‌ ಟೆಸ್ಟ್‌ ಬಳಿಕ ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

ಗಂಭೀರ ಆರೋಪಗಳನ್ನು ಹೊತ್ತಿರುವ ಅವರ ತನಿಖೆಗಾಗಿ ಎಸ್​ಐಟಿ ತನ್ನ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಅದನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.

ಬೆಂಗಳೂರಿನ 42ನೇ ಎಸಿಎಮ್​ಸಿ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು ಪ್ರಜ್ವಲ್ ಅವರಿಗೆ ಯಾವುದೇ ಕಿರುಕುಳ ನೀಡದಂರೆ ಎಸ್​ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅದಲ್ಲದೆ ಪ್ರಜ್ವಲ್‌ ರೇವಣ್ಣ ಅವರಿಗೆ ತನಿಖೆ ಸ್ಪಂದಿಸುವಂತೆ ಸೂಚನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಫೋನ್ ಕಿತ್ಕೋತಿಯಾ ಎಂದು ಗಂಡನ ಮೇಲೆ ಸಿಟ್ಟಿಗೆದ್ದ ಮಹಿಳೆ ಖತರ್ನಾಕ್ ಕೃತ್ಯ ಮಾಡಿದಳು