ಬೆಂಗಳೂರು : ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಮಾನ ಹರಾಜು ಮಾಡಿದ ಆರೋಪ ಎದುರಿಸುತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 6 ದಿನಗಳ ಕಾಲ ಎಸ್‌ಐಟಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ.
ಎಸಿಎಮ್ಎಮ್ ನ್ಯಾಯಾಲಯದ ನ್ಯಾಯಧೀಶ ಎನ್. ಶಿವಕುಮಾರ್ ಈ ಆದೇಶ ಹೊರಡಿಸಿದ್ದಾರೆ. ಗುರುವಾರ ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ್ದ ಎಸ್‌ಐಟಿ ಪೊಲೀಸರು ಮೆಡಿಕಲ್ ಟೆಸ್ಟ್ ಬಳಿಕ ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಗಂಭೀರ ಆರೋಪಗಳನ್ನು ಹೊತ್ತಿರುವ ಅವರ ತನಿಖೆಗಾಗಿ ಎಸ್‌ಐಟಿ ತನ್ನ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಅದನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.
ಬೆಂಗಳೂರಿನ 42ನೇ ಎಸಿಎಮ್ಸಿ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು ಪ್ರಜ್ವಲ್ ಅವರಿಗೆ ಯಾವುದೇ ಕಿರುಕುಳ ನೀಡದಂರೆ ಎಸ್‌ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅದಲ್ಲದೆ ಪ್ರಜ್ವಲ್ ರೇವಣ್ಣ ಅವರಿಗೆ ತನಿಖೆ ಸ್ಪಂದಿಸುವಂತೆ ಸೂಚನೆ ನೀಡಿದ್ದಾರೆ.<>