Select Your Language

Notifications

webdunia
webdunia
webdunia
webdunia

ಪ್ರಜ್ವಲ್ ರೇವಣ್ಣ ಒಬ್ಬ ನಾಲಾಯಕ್ ಸಂಸದ, ವಿಕೃತ ಕಾಮಿ: ಪುಷ್ಪಾ ಅಮರನಾಥ್ ಆಕ್ರೋಶ

Prajwal Revanna Pendrive Case

Sampriya

ಬೀದರ್ , ಬುಧವಾರ, 1 ಮೇ 2024 (16:05 IST)
ಬೀದರ್: ಸಂಸದ ಪ್ರಜ್ವಲ್ ರೇವಣ್ಣ ಒಬ್ಬ ನಾಲಾಯಕ್ ಸಂಸದ. ಆತನಿಗೆ ನಿರ್ಭಯಾ ಅತ್ಯಾಚಾರ, ವಿಕೃತಕಾಮಿ ಉಮೇಶ್ ರೆಡ್ಡಿ ಪ್ರಕರಣದ ಮಾದರಿಯಲ್ಲಿ ಆತನಿಗೆ ಶಿಕ್ಷೆ ವಿಧಸಬೇಕು. ನೀಡುವ ಶಿಕ್ಷೆ ಮೂಲಕ ಮತ್ತೇ ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸಬಾರದೆಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾದ್ಯಕ್ಷೆ ಪುಷ್ಪಾ ಅಮರನಾಥ್ ಆಗ್ರಹಿಸಿದರು.

ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿಯಾಗಿರುವ  ಸಂಸದ ಪ್ರಜ್ವಲ್ ರೇವಣ್ಣಗೆ ಸೂಕ್ತ ಶಿಕ್ಷೆಯಾಗಬೇಕು. ಇಂದು ಪೆನ್‌ಡ್ರೈವ್‌ ಪ್ರಕರಣದಲ್ಲಿರುವ ಮಹಿಳೆಯರು ಇದ್ದೂ ಸತ್ತಂತಿದ್ದಾರೆ. ಆದರೆ ಬಿಜೆಪಿಯವರು ಈ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ನಾರಿಶಕ್ತಿ, ಮಹಿಳಾ ಸಬಲೀಕರಣ, ಬೇಟಿ ಬಚಾವೋ ಬೇಟಿ ಪಡಾವೋ ಎಂದು ಬಿಜೆಪಿಯವರು ಹೇಳುತ್ತಾರೆ. ಪ್ರಧಾನಿ ಮೋದಿ ಅವರು ಅವರ ಭಾಷಣಗಳಲ್ಲಿ ಮಹಿಳೆಯರ ಬದುಕು ಬಂಗಾರ ಮಾಡುತ್ತೇವೆ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಮೋದಿ ಅವರ ಪರಿವಾರದಲ್ಲಿ ಕೊಲೆಗಡುಕರು ಇದ್ದಾರೆಯೇ? ಇಂತಹವರ ರಕ್ಷಣೆಗೆ ಕೇಂದ್ರ ಸರ್ಕಾರವಿದೆಯೇ? ಬಿಲ್ಕಿಸ್ ಬಾನು, ಉನ್ನಾವ್ ದಲ್ಲಿ ಜೀವಂತ ಸುಟ್ಟರೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದರು.

ಇನ್ನೂ ಪೆನ್‌ಡ್ರೈವ್ ಪ್ರಕರಣ ವೈರಲ್‌ ಆಗುತ್ತಿದ್ದ ಹಾಗೇ ಪ್ರಜ್ವಲ್ ದೇಶ ಬಿಟ್ಟು ಹೋಗುವಂತೆ ಸಹಾಯ ಮಾಡಿದವರಾರು. ವಿಮಾನ ನಿಲ್ದಾಣ ಪ್ರಾಧಿಕಾರ, ಪಾಸ್ ಪೋರ್ಟ್ ಇಲಾಖೆ ಕೇಂದ್ರದ ವ್ಯಾಪ್ತಿಗೆ ಬರುತ್ತೆ. ಹೀಗಿದ್ದರೂ ತಡೆಯಲಿಲ್ಲವೇಕೆ? ಎಂದು ಪ್ರಶ್ನಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಮತ್ತೆ ಪ್ರಧಾನಿಯಾಗಲು ಜನರೇ ತೀರ್ಮಾನಿಸಿದ್ದಾರೆ: ಬಿವೈ ವಿಜಯೇಂದ್ರ