ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಆರೋಪವನ್ನು ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ಅಸ್ಲೀಲ ವಿಡಿಯೋ ವೈರಲ್ ಆಗುತ್ತಿರುವ ಸುಳಿವಿನ ಮೇರೆಗೆ ವಿದೇಶಕ್ಕೆ ಹಾರಿದ್ದರು.
ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಿದೆ.
ಇದೀಗ ಸಿಕ್ಕಿದ ಮಾಹಿತಿ ಪ್ರಕಾರ ಜರ್ಮನ್‌ಗೆ ತೆರಳಿದ್ದ ಪ್ರಜ್ವಲ್ ರೇವಣ್ಣ ಅವರು ನಿನ್ನೆ ಮಧ್ಯರಾತ್ರಿ ದುಬೈಗೆ ಬಂದಿದ್ದಾರೆಂಬ ಮಾಹಿತಿಯಿದೆ. ಅಲ್ಲಿಂದ್ದ ನೇರವಾಗಿ ಬೆಂಗಳೂರಿಗೆ ಆಗಮಿಸಿ ತನಿಖೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.
ಇನ್ನೂ ವಿಚಾರಣೆಗೆ ಸಲುವಾಗಿ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ ಪ್ರಜ್ವಲ್, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ.
ಸತ್ಯ ಆದಷ್ಟು ಬೇಗ ಹೊರಬರಲಿದೆ. ಎಂದು ಬರೆದುಕೊಂಡಿದ್ದರು.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಎಚ್.ಡಿ. ರೇವಣ್ಣಗೆ ವಿಶೇಷ ತನಿಖಾ ತಂಡ ನೋಟಿಸ್ ಜಾರಿ ಮಾಡಿತ್ತು. ನೋಟಿಸ್ಗೆ ತಮ್ಮ ವಕೀಲರ ಮೂಲಕ ಉತ್ತರಿಸಿದ್ದ ಪ್ರಜ್ವಲ್ 7 ದಿನಗಳ ಕಾಲಾವಕಾಶ ಕೋರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ.