Select Your Language

Notifications

webdunia
webdunia
webdunia
webdunia

ಪ್ರಜ್ವಲ್ ರೇವಣ್ಣ ಟಿಕೆಟ್ ಸಿಗದಂತೆ ಒತ್ತಡ ಹೇರಿದ್ದರೇ ಸಹೋದರ ನಿಖಿಲ್? ನಿಖಿಲ್ ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ಟಿಕೆಟ್ ಸಿಗದಂತೆ ಒತ್ತಡ ಹೇರಿದ್ದರೇ ಸಹೋದರ ನಿಖಿಲ್? ನಿಖಿಲ್ ಹೇಳಿದ್ದೇನು?
ಬೆಂಗಳೂರು , ಗುರುವಾರ, 9 ನವೆಂಬರ್ 2017 (16:20 IST)
ಬೆಂಗಳೂರು: ಜೆಡಿಎಸ್ ವರಿಷ್ಠ ದೇವೇಗೌಡರ ಮೊಮ್ಮಕ್ಕಳ ನಡುವೆ ಪರಸ್ಪರ ಭಿನ್ನಮತವಿದೆ. ಅದೇ ಕಾರಣಕ್ಕೆ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೈ ತಪ್ಪಿದೆ ಎಂಬ ಸುದ್ದಿಗಳ ಬಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

 
ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಜತೆ ನಿಖಿಲ್ ಕುಮಾರಸ್ವಾಮಿಗೆ ಆಪ್ತ ಸಂಬಂಧವಿದೆ. ಇದೇ ಕಾರಣಕ್ಕೆ ಇಲ್ಲಿ ಪ್ರಜ್ವಲ್ ಗೆ ಟಿಕೆಟ್ ಸಿಗದಂತೆ ನಿಖಿಲ್ ಮಾಡಿದ್ದಾರೆಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಈ ಬಗ್ಗೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ, ನಮ್ಮ ನಡುವೆ ಭಿನ್ನಮತವಿದೆ ಎಂದು ಯಾರೋ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸದ್ಯಕ್ಕೆ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದೇನೆ. ‘ಕುರುಕ್ಷೇತ್ರ’ ಚಿತ್ರೀಕರಣ ಮುಗಿದ ಬಳಿಕ ತಂದೆಯ ಜತೆ ಚುನಾವಣಾ ಪ್ರಚಾರಕ್ಕೆ ಬರುತ್ತೇನೆ.

ಪ್ರಜ್ವಲ್ ಗೆ ಟಿಕೆಟ್ ಸಿಗದಂತೆ ನಾನೇನು ಮಾಡಿಲ್ಲ. ಅವನು ಎಲ್ಲಿಂದಲಾದರೂ ಸ್ಪರ್ಧಿಸಲಿ. ನನಗೆ ಅದಕ್ಕೂ ಸಂಬಂಧವಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶಿವರಾಜ್ ಕುಮಾರ್ ದೂರಿನ ಬಿಸಿಗೆ ಕರಗಿದ ಗೃಹಸಚಿವ ರಾಮಲಿಂಗಾ ರೆಡ್ಡಿ