Select Your Language

Notifications

webdunia
webdunia
webdunia
webdunia

ದೇವೇಗೌಡರು, ಎಚ್ ಡಿಕೆ ಹೇಳಿದ ಹಾಗೆ ಕೇಳ್ತೀನಿ: ಪ್ರಜ್ವಲ್ ರೇವಣ್ಣ

ಪ್ರಜ್ವಲ್ ರೇವಣ್ಣ
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾದ ಪ್ರಶ್ನೆಗಳಿಗೆ ಜೆಡಿಎಸ್ ಯುವ ನಾಯಕ, ಎಚ್ ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಸ್ಪಷ್ಟನೆ ನೀಡಿದ್ದಾರೆ.
 

ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದಾಗ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧಿಸಬಹುದು ಎಂದು ಜೆಡಿಎಸ್ ವರಿಷ್ಠ ದೇವೇಗೌಡರು ಸುಳಿವು ನೀಡಿದ್ದರು. ಈ ಬಗ್ಗೆ ಮಾಧ್ಯಮಗಳು ಪ್ರಜ್ವಲ್ ಅವರನ್ನು ಪ್ರಶ್ನಿಸಿದಾಗ ದೇವೇಗೌಡರ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.

ನಾನು ತಾತ ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಹೇಳಿದ ಹಾಗೆ ಕೇಳ್ತೀನಿ. ದೇವೇಗೌಡರ ನಿರ್ಧಾರಕ್ಕೆ ಬದ್ಧ.  ಅವರು ಸ್ಪರ್ಧಿಸು ಎಂದರೆ ಸ್ಪರ್ಧಿಸುತ್ತೇನೆ. ಕಳೆದ ಒಂದೂವರೆ ತಿಂಗಳಿನಿಂದ ಅನಾರೋಗ್ಯದಿಂದಾಗಿ ಮನೆಯಲ್ಲೇ ಇದ್ದೆ. ಸಕ್ರಿಯ ರಾಜಕಾರಣದಿಂದ ದೂರವಿದ್ದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಸಭೆಗೆ ತಾಯಿ ಸೋನಿಯಾ ಗಾಂಧಿ ಗೈರು