ಪುರುಷತ್ವ ಪರೀಕ್ಷೆಯಲ್ಲಿ ಪ್ರಜ್ವಲ್ ರೇವಣ್ಣ ರಿಸಲ್ಟ್ ಏನಾಯ್ತು

Krishnaveni K
ಶುಕ್ರವಾರ, 5 ಜುಲೈ 2024 (09:22 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣರನ್ನು ಎಸ್ ಐಟಿ ಅಧಿಕಾರಿಗಳು ಪುರುಷತ್ವ ಪರೀಕ್ಷೆಗೊಳಪಡಿಸಿದ್ದರು. ಅದರ ಫಲಿತಾಂಶ ಈಗ ಬಂದಿದೆ.

ಪ್ರಜ್ವಲ್ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬುದಕ್ಕೆ ಇದು ಪ್ರಮುಖ ಸಾಕ್ಷಿಯಾಗಲಿದೆ. ಇದೀಗ ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಯಲ್ಲಿ ಪಾಸಾಗಿದ್ದು ದೈಹಿಕ ಸಂಪರ್ಕರ ನಡೆಸಲು ಸಮರ್ಥ ಎಂದು  ವರದಿ ಬಂದಿದೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇ 31 ರಂದು ಅವರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದರು. ಪುರುಷತ್ವ ಪರೀಕ್ಷಾ ವರದಿ ಈಗ ಎಸ್ ಐಟಿ ಅಧಿಕಾರಿಗಳ ಕೈ ಸೇರಿದೆ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್ ಪರೀಕ್ಷೆ ನಡೆಸಲಾಗಿತ್ತು. ಪ್ರಜ್ವಲ್ ರೇವಣ್ಣ ವಿರುದ್ಧವಾಗಿ ಈ ಪುರುಷತ್ವ ಪರೀಕ್ಷೆ ಸಾಕ್ಷಿಯಾಗಿ ಬಳಕೆಯಾಗಲಿದೆ. ಇದಲ್ಲದೆ ಧ್ವನಿ ಪರೀಕ್ಷೆ ಕೂಡಾ ಮಾಡಲಾಗಿದ್ದು, ಅದರ ಫಲಿತಾಂಶ ಇನ್ನಷ್ಟೇ ಬರಬೇಕಿದೆ. ಕಿರುಕುಳ ನೀಡಿದ್ದ ಮಹಿಳೆ ತನಗೆ ಪರಿಚಯವೇ ಇಲ್ಲ ಎಂದು ಪ್ರಜ್ವಲ್ ಹೇಳಿಕೊಂಡಿದ್ದರು. ಆದರೆ ಇದೀಗ ಈ ಪರೀಕ್ಷೆ ಫಲಿತಾಂಶಗಳು ಪ್ರಜ್ವಲ್ ಗೆ ಮುಳುವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪುಣೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, 18ವರ್ಷದ ಯುವಕ ಅರೆಸ್ಟ್‌

Indigo Crisis: ಇನ್ನೂ ಎಷ್ಟು ಲಗೇಜ್‌ಗಳು ಪ್ರಯಾಣಿಕರ ಕೈ ಸೇರಲಿದೆ ಗೊತ್ತಾ

ತಿರುಪತಿ, ಶಿರಡಿಗೆ ಸಂಪರ್ಕಿಸುವ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ, ಪ್ರಯಾಣಿಕರಿಗೆ ಗುಡ್‌ನ್ಯೂಸ್

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಮುಂದಿನ ಸುದ್ದಿ